ಕಲಬುರಗಿ | ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ರದ್ದತಿಗೆ ಆಗ್ರಹ

Date:

ನವೆಂಬರ್ 17 ರಂದು ಕೆಪಿಎಸ್ಸಿ ನಡೆಸಿದ್ದ ಕಲ್ಯಾಣ ಕರ್ನಾಟಕ ವೃಂದದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ಮರುಪರೀಕ್ಷೆ ನಡೆಸಬೇಕೆಂದು ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಎಸ್‌ಎಫ್‌ಐ ಸೇರಿದಂತೆ ಇತರೆ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸುಜಾತಾ ಮಾತನಾಡಿ, ʼನ.17ರಂದು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ನಡೆಸಿದ್ದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ರಾಯಚೂರಿನ ಪರೀಕ್ಷೆ ಕೇಂದ್ರವೊಂದರಲ್ಲಿ ಇದ್ದ 24 ಅಭ್ಯರ್ಥಿಗಳಲ್ಲಿ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಕೊಟ್ಟಿದ್ದು, ಉಳಿದ 12 ಅಭ್ಯರ್ಥಿಗಳಿಗೆ ಒಂದು ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಸದೆ, ಪ್ರತಿಯಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ʼನೇಮಕಾತಿ ಪರೀಕ್ಷೆಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ಸರ್ಕಾರ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ ಪರಿಣಾಮವಾಗಿ ನೂರಾರು ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ. ಈ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಕುರಿತು ಸೂಕ್ತ ತನಿಖೆಯಾಗಬೇಕು, ಮರುಪರೀಕ್ಷೆ ಮಾಡಬೇಕು. ಅಕ್ರಮ ಎಸಗಿದ ತಪ್ಪಿಸ್ಥರನ್ನು ಅಮಾನತುಗೊಳಿಸಿ ಬಂಧಿಸಬೇಕು. ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ಕೂಡಲೇ ರದ್ದುಗೊಳಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಪ್ರಮುಖರಾದ ಮೇಘಾ, ಲವಿತ್ರಾ, ಪ್ರೇಮ್, ಭರತ್, ನಾಗಮ್ಮ, ಹುಲಿಗಮ್ಮ, ಮಾಲಾಶ್ರೀ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...