ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಹಾಸ್ಟೆಲ್ ಮಾಲಕನ ವಿರುದ್ಧ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಚಿಂಚೋಳಿ ಕ್ರಾಸ್‌ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅನುದಾನಿತ ಮಹಾದೇವಿ ತಾಯಿ ಶಕ್ತಿ ಸದನ ಗೃಹದ ಮಾಲಕ ಹಾಗೂ ಆಡಳಿತಗಾರ ಅನಂತರಾಜು ವಿರುದ್ಧ ಅಫಜಲಪುರ ತಾಲೂಕಿನ ಗ್ರಾಮದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಿಳೆ ನೀಡಿರುವ ದೂರಿನ ಪ್ರಕಾರ, ಸೆ.17ರಂದು ರಾತ್ರಿ ಅನಂತರಾಜು ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೂದಲು ಹಿಡಿದು ಎಳೆದಾಡಿ ಹಾಸ್ಟೆಲ್‌ನಿಂದ ಹೊರಗೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಅನಂತರಾಜು ಹಲವು ಬಾರಿ ಅಶ್ಲೀಲವಾಗಿ ಮಾತನಾಡಿದ್ದು, ತಾನು ಹೇಳಿದಂತೆ ನಡೆದುಕೊಳ್ಳದಿದ್ದರೆ ಹಾಸ್ಟೆಲ್‌ನಿಂದ ಹೊರಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
This video cannot be played in your browser. Open the video directly

ಇದನ್ನು ಓದಿದ್ದೀರಾ? ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು
ದೂರಿನ ಆಧಾರದ ಮೇಲೆ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.





