ಕಲಬುರಗಿ | ಕರ್ತವ್ಯ ಲೋಪ ಆರೋಪ: ರಟಕಲ್ ಪಿಡಿಒ ಜ್ಞಾನದೇವ ಅಮಾನತು

Date:

ಕಾಳಗಿ ತಾಲೂಕಿನ ರಟಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಜ್ಞಾನದೇವ ಅವರನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಆಡಳಿತ ಆದೇಶ ಹೊರಡಿಸಿದೆ.

- Advertisement -

‘ಸಾರ್ವಜನಿಕರಿಂದ ಬಂದಿದ್ದ ದೂರುಗಳು ಮತ್ತು ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದರು. ಈ ವೇಳೆ ಆರೋಪಗಳಿಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕೆಲವು ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

‘ಗ್ರಾಮ ಪಂಚಾಯಿತಿ ಆಡಳಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಕರ್ತವ್ಯ ಪಾಲನೆಯಲ್ಲಿ ಲೋಪ ಹಾಗೂ ಸೇವಾ ನಿಯಮಗಳ ಉಲ್ಲಂಘನೆ ಕುರಿತು ಜ್ಞಾನದೇವ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ವಿಚಾರಣೆ ನಡೆಸಲು’ ನಿರ್ಧರಿಸಲಾಗಿದೆ.

‘ವಿಚಾರಣೆ ಪ್ರಕ್ರಿಯೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಯಾದಗಿರಿ | ಜೆಡಿಎಸ್ ಸಾಂಸ್ಕೃತಿಕ ವಿಭಾಗದ ಜಿಲ್ಲಾಧ್ಯಕ್ಷರಾಗಿ ಭೀಮಾಶಂಕರ ಯರಗೊಳ ನೇಮಕ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರು ಈ ಸಂಬಂಧ ಅಮಾನತು ಆದೇಶ ಹೊರಡಿಸಿದ್ದು, ಅದು ತಕ್ಷಣದಿಂದಲೇ ಜಾರಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...