‌ಕಲಬುರಗಿ | ಹೊರಗುತ್ತಿಗೆ ನೌಕರರ ಶೋಷಣೆ ಆರೋಪ; ಪ್ರತಿಭಟನೆ

Date:

ಕೆಲಸದ ಸ್ಥಳದಲ್ಲಿ ಹೊರಗುತ್ತಿಗೆ ನೌಕರರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿ, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿ ಕಲಬುರಗಿ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, “ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳಲ್ಲಿ ದಿನನಿತ್ಯ 12-14 ತಾಸು ದುಡಿದ ನೌಕರರ ವೇತನ ಯಾವಾಗ ಕೈಗೆ ಬರುತ್ತದೆಯೋ ಆ ದೇವರೇ ಬಲ್ಲ. ಈ ಹಿಂದೆ ರಂಜಾನ್ ಹಬ್ಬದ ಸಮಯದಲ್ಲಿ 5-6 ತಿಂಗಳ ಬಾಕಿ ವೇತನಕ್ಕಾಗಿ ಸ್ವಿಸ್(ಶಾರ್ಪ್) ಮ್ಯಾನ್ ಪವರ್ ಏಜೆನ್ಸಿಗೆ ಕೈ ಕಾಲು ಬಿದ್ದು ಗೋಳಾಡಿದರೂ ವೇತನ ಪೂರ್ತಿಯಾಗಿ ಪಾವತಿಸದೇ ಹಬ್ಬದಲ್ಲಿ ಉಪವಾಸ ವನವಾಸ ಕಾಲ ಕಳೆಯುವಂತಾಯಿತು. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಲಿಲ್ಲ. ಸರ್ಕಾರದಿಂದ ವೇತನ ಮಂಜೂರಾದರೂ ವೇತನ ಪಾವತಿ ವಿಷಯದಲ್ಲಿ ಏಜೆನ್ಸಿಗಳು ನೌಕರರನ್ನು ಕಡೆಗಣಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಶಾರ್ಪ್ ಏಜೆನ್ಸಿಯ 2024-25 ಸಾಲಿನಲ್ಲಿ ಯಾವ ನೌಕರರಿಗೂ ತಾತ್ಕಾಲಿಕ ನೇಮಕಾತಿ ಆದೇಶ ಕೊಟ್ಟಿಲ್ಲ. ಪ್ರತಿ ತಿಂಗಳು ಇ.ಪಿ.ಎಫ್ ಹಣ ಜಮಾ ಮಾಡದೇ ಮೋಸ ಮಾಡಲಾಗಿದೆ. ಇಷ್ಟೆಲ್ಲಾ ಶೋಷಣೆ ನಡೆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಮೌನವಹಿಸಲು ಕಾರಣವೇನು? ಕೂಡಲೇ ಬಾಕಿ ವೇತನ ಪಾವತಿಸಲು ತಾತ್ಕಾಲಿಕ ಆದೇಶ ಕೊಡಿಸಲು ಅಲ್ಲದೆ ಇ.ಪಿ.ಎಫ್ ನೌಕರರ ಹೆಸರಿಗೆ ಜಮಾ ಮಾಡಿಸಲು ಶಿಸ್ತಿನ ಕ್ರಮ ಜರುಗಿಸಿ ನೌಕರರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಬೇಕೆಂದು” ಮನವಿ ಸಲ್ಲಿಸಿದರು.

ಇದನ್ನೂ ಓದಿ: ಕಲಬುರಗಿ | ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡಿ, ಚಿಂಚೋಳಿ ತಾಲೂಕ ಅಧ್ಯಕ್ಷೆ ನರಸಮ್ಮ ಚಂದನಕೇರಾ, ಉಪಾಧ್ಯಕ್ಷ ಮೇಘರಾಜ ಕಠಾರೆ, ಅಧ್ಯಕ್ಷ ಆಳಂದ ತಾಲೂಕ ನಾಗರತ್ನಾ ಮದನಕ‌ರ್, ಜಿಲ್ಲಾ ಅಧ್ಯಕ್ಷ ಪರಶುರಾಮ ಹಡಗಲಿ, ನಗರ ಅಧ್ಯಕ್ಷ ರಾಮಚಂದ್ರ ಪವಾರ, ಚಿತ್ತಾಪೂರ ತಾಲೂಕ ಅಧ್ಯಕ್ಷ ರವಿ ಯರಗೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...