ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ ನಿಲಯಗಳಲ್ಲಿ ಆಹಾರ ಧಾನ್ಯಗಳ ಕಲಬೆರಕೆ, ಸರ್ಕಾರಿ ಆಹಾರ ಸಾಮಗ್ರಿಗಳ ದುರುಪಯೋಗ, ಕಳಪೆ ಊಟ ಪೂರೈಕೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ನಿರ್ಲಕ್ಷ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಅವ್ಯವಸ್ಥೆಗೆ ಸಂಬಂಧಿಸಿದಂತೆ ತಾಲೂಕಿನ ಎಲ್ಲಾ ಬಿಸಿಎಂ ಹಾಸ್ಟೆಲ್‌ಗಳ ವಾರ್ಡನ್‌ಗಳು ಹಾಗೂ ತಾಲೂಕು ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ, ಭೀಮ ಆರ್ಮಿ ಭಾರತ್ ಏಕತಾ ಮಿಷನ್ ವಿಭಾಗೀಯ ಅಧ್ಯಕ್ಷ ಸೂರ್ಯಕಾಂತ ಜಿಡಗಾ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರು.

- Advertisement -

ನವೆಂಬರ್ 8 ಮತ್ತು 11ರಂದು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ವಿಡಿಯೋ ಹಾಗೂ ಛಾಯಾಚಿತ್ರಗಳ ಮೂಲಕ ಅವ್ಯವಸ್ಥೆಗಳನ್ನು ದಾಖಲಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ. ಜೇವರ್ಗಿ ಹಾಸ್ಟೆಲ್‌ನಲ್ಲಿ 100 ಕೆಜಿ ಹಿಟ್ಟಿಗೆ ಕೇವಲ 25 ಕೆಜಿ ಅಕ್ಕಿ ಹಾಗೂ 75 ಕೆಜಿ ಜೋಳ ಮಿಶ್ರಣ ಮಾಡಿ ರೊಟ್ಟಿ ತಯಾರಿಸಲಾಗುತ್ತಿದೆ. ಕಳೆದ ಎರಡು ತಿಂಗಳಿಂದ ಮೇಲಧಿಕಾರಿಗಳ ಸೂಚನೆಯಂತೆ ಈ ರೀತಿ ಮಾಡಲಾಗುತ್ತಿದೆ” ಎಂದು ಅಡುಗೆ ಸಿಬ್ಬಂದಿ ಹೇಳಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಇದಲ್ಲದೆ, “ನವೆಂಬರ್ 11ರಂದು ಹಾಸ್ಟೆಲ್ ಮುಂಭಾಗ KA-32 AB-2738 ನೋಂದಣಿ ಸಂಖ್ಯೆಯ ಆಟೋದಲ್ಲಿ 50 ಕೆಜಿ ಅಕ್ಕಿ ಮೂಟೆ ಪತ್ತೆಯಾಗಿದ್ದು, ಸರ್ಕಾರಿ ಆಹಾರ ಧಾನ್ಯಗಳ ಸಾಗಾಟದ ಉದ್ದೇಶ ಹಾಗೂ ಅದರ ಮೂಲದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಅಡುಗೆ ಮನೆಯಲ್ಲಿ ಪಾಮ್ ಆಯಿಲ್, ಮೈದಾ ಹಿಟ್ಟು, ಅವಧಿ ಮುಗಿಯುವ ಹಂತದಲ್ಲಿರುವ ಪೇಸ್ಟ್, ಅಸ್ವಚ್ಛ ಫ್ರಿಡ್ಜ್ ಹಾಗೂ ತುಕ್ಕು ಹಿಡಿದ ಡಬ್ಬಿಗಳು ಪತ್ತೆಯಾಗಿವೆ. ಸರ್ಕಾರ ನಿಗದಿಪಡಿಸಿದ ಆಹಾರ ಮೆನುವನ್ನು ಪಾಲಿಸದೆ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ನೀಡಲಾಗುತ್ತಿದೆ” ಎಂಬ ಆರೋಪವೂ ಕೇಳಿಬಂದಿದೆ.

Advertisements
3640735

“ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳ ವಸತಿ ವ್ಯವಸ್ಥೆಯೂ ಶೋಚನೀಯವಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಕೊಠಡಿಗಳ ಬಾಗಿಲುಗಳು ಹಾಳಾಗಿದ್ದು, ವಿದ್ಯುತ್ ಸ್ವಿಚ್ ಬೋರ್ಡ್‌ಗಳಿಂದ ತಂತಿಗಳು ಹೊರಬಂದಿವೆ. ವಿದ್ಯಾರ್ಥಿಗಳಿಗೆ ಸರಿಯಾದ ಹಾಸಿಗೆ ವ್ಯವಸ್ಥೆ ಇಲ್ಲದೆ ನೆಲದ ಮೇಲೆ ಮಲಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಪಾಚಿ, ಮೇಲ್ಛಾವಣಿಯಲ್ಲಿ ಕೊಳಚೆ, ಬ್ಲಾಕ್ ಆಗಿರುವ ಚರಂಡಿ ಹಾಗೂ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಅಪಾಯ ತಂದೊಡ್ಡುವಂತಿವೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ಆಂದೋಲ ಗ್ರಾಮದ ದೇವರಾಜ ಅರಸು ಹಾಸ್ಟೆಲ್‌ನಲ್ಲಿಯೂ ಇದೇ ರೀತಿಯ ಅವ್ಯವಸ್ಥೆಗಳಿವೆ ಎಂದು ಸೂರ್ಯಕಾಂತ ಜಿಡಗಾ ದೂರಿದ್ದಾರೆ. ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ ನೀಡದಿರುವುದು, ತರಕಾರಿಗಳ ಕೊರತೆ, ವಾರ್ಡನ್‌ಗಳ ಅನಿಯಮಿತ ಭೇಟಿ, ಹಾಜರಾತಿ ದಾಖಲೆಗಳ ನಿರ್ವಹಣೆಯಲ್ಲಿ ಲೋಪ ಹಾಗೂ ಫಂಗಸ್ ಹಿಡಿದ ಬೆಲ್ಲವನ್ನು ಬಳಕೆ ಮಾಡುತ್ತಿರುವುದು ಸೇರಿದಂತೆ ಹಲವು ಗಂಭೀರ ಸಮಸ್ಯೆಗಳನ್ನು ಅವರು ಉಲ್ಲೇಖಿಸಿದ್ದಾರೆ. ಸಮರ್ಪಕ ಊಟ ದೊರೆಯದ ಕಾರಣ ವಿದ್ಯಾರ್ಥಿಗಳು ಮನೆಯಿಂದಲೇ ಅಕ್ಕಿ, ಬೇಳೆ ತರುವ ಪರಿಸ್ಥಿತಿ ಎದುರಾಗಿದೆ. ಫ್ಯಾನ್‌ಗಳು ಬೀಳುವ ಸ್ಥಿತಿಯಲ್ಲಿದ್ದು, ಮುರಿದ ವಿದ್ಯುತ್ ಸ್ವಿಚ್ ಬೋರ್ಡ್‌ಗಳಿಂದ ಅಪಾಯ ಎದುರಾಗುವ ಸಾಧ್ಯತೆಯಿದೆ” ಎಂದು ತಿಳಿಸಿದ್ದಾರೆ.

3640737

ಏಳು ದಿನಗಳ ಗಡುವು; ಲೋಕಾಯುಕ್ತಕ್ಕೆ ದೂರು ಎಚ್ಚರಿಕೆ

“ಹಾಸ್ಟೆಲ್‌ಗಳಲ್ಲಿನ ಅವ್ಯವಸ್ಥೆಗಳ ಕುರಿತು ತಕ್ಷಣ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ಆರೋಪಿತ ವಾರ್ಡನ್‌ಗಳು ಹಾಗೂ ತಾಲೂಕು ಅಧಿಕಾರಿಯನ್ನು ಅಮಾನತುಗೊಳಿಸಬೇಕು. ಆಹಾರ ಧಾನ್ಯಗಳ ಖರೀದಿ, ದಾಸ್ತಾನು ಮತ್ತು ಬಳಕೆಯ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸಿ, ಸರ್ಕಾರದ ಹಣ ದುರುಪಯೋಗವಾಗಿದ್ದರೆ ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು. ವಿದ್ಯಾರ್ಥಿಗಳ ಜೀವ ಮತ್ತು ಆರೋಗ್ಯಕ್ಕೆ ಅಪಾಯ ಉಂಟುಮಾಡಿದ ಆರೋಪಗಳ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಿತರನ್ನು ಹಾಸ್ಟೆಲ್ ಕರ್ತವ್ಯದಿಂದ ದೂರವಿಟ್ಟು, ಸಾಕ್ಷ್ಯ ನೀಡುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಕ್ಷಣೆ ಒದಗಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಈ ಕುರಿತು ವಿಡಿಯೋ ಮತ್ತು ಛಾಯಾಚಿತ್ರಗಳ ಸಾಕ್ಷ್ಯಗಳನ್ನು ದೂರಿನೊಂದಿಗೆ ಸಲ್ಲಿಸಿರುವುದಾಗಿ ತಿಳಿಸಿರುವ ಅವರು, ಏಳು ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತ ಹಾಗೂ ಉನ್ನತ ಅಧಿಕಾರಿಗಳ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯಕ್ಕೆ ಆಸರೆಯಾಗಬೇಕಾದ ವಸತಿ ನಿಲಯಗಳಲ್ಲೇ ಇಂತಹ ಅವ್ಯವಸ್ಥೆಗಳು ನಡೆಯುತ್ತಿವೆ ಎಂಬ ಆರೋಪಗಳು ಗಂಭೀರ ಚರ್ಚೆಗೆ ಕಾರಣವಾಗಿದ್ದು, ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಆಹಾರ, ಆರೋಗ್ಯ ಮತ್ತು ಸುರಕ್ಷತೆಯನ್ನು ಖಾತರಿಪಡಿಸಬೇಕಿದೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...

ಉಡುಪಿ | ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ವದ್ದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು...

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...