ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

Date:

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಕಿಯಾ ಕಾರು ಮಾರಾಟ ಮಳಿಗೆಯ ಇಬ್ಬರು ಪ್ರಮುಖ ಸಿಬ್ಬಂದಿ ವಿರುದ್ಧ ವಂಚನೆ ಹಾಗೂ ನಂಬಿಕೆ ದ್ರೋಹದ ಆರೋಪದಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹುಮನಾಬಾದ್ ರಸ್ತೆಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿರುವ ಕುಮಾರ ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ಈ ಹಣಕಾಸಿನ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಮಳಿಗೆಯ ವ್ಯವಸ್ಥಾಪಕ ಬಸವರಾಜ ಕಾಮನಳ್ಳಿ ಮತ್ತು ಮಾರಾಟ ವ್ಯವಸ್ಥಾಪಕ ಭೀಮಾಶಂಕರ ಕುಂಬಾರ ಆರೋಪಿಗಳಾಗಿದ್ದು, ಸಂಸ್ಥೆಯ ಮಾಲೀಕ ರಾಜಕುಮಾರ ಭೀಮಾಶಂಕರ ಬಿಲಗುಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ದೂರಿನ ವಿವರಗಳ ಪ್ರಕಾರ, ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಆರೋಪಿಗಳಿಗೆ ಮಾಲೀಕರು ಸಂಪೂರ್ಣ ಜವಾಬ್ದಾರಿ ವಹಿಸಿದ್ದರು. ಕಾರುಗಳ ಮಾರಾಟ, ಗ್ರಾಹಕರಿಂದ ಹಣ ಸಂಗ್ರಹ ಹಾಗೂ ಕಂಪನಿಯ ಖಾತೆಗೆ ಹಣ ಜಮೆ ಮಾಡುವ ಹೊಣೆಗಾರಿಕೆ ಅವರ ಮೇಲಿತ್ತು. ಆದರೆ, ಇದೇ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

2024ರ ಜೂನ್‌ನಿಂದ 2025ರ ಜೂನ್‌ವರೆಗೆ ಸಂಸ್ಥೆ ₹2.15 ಕೋಟಿಗೂ ಅಧಿಕ ಮೌಲ್ಯದ 32 ಹಳೆಯ ಕಾರುಗಳನ್ನು ಖರೀದಿಸಿತ್ತು. ಈ ಕಾರುಗಳನ್ನು ಮಾರಾಟ ಮಳಿಗೆಯಲ್ಲಿ ಇರಿಸಲಾಗಿತ್ತು. ಗ್ರಾಹಕರಿಗೆ ಕಾರುಗಳನ್ನು ಮಾರಾಟ ಮಾಡಿದ ನಂತರ ಹಣವನ್ನು ಸಂಸ್ಥೆಯ ಖಾತೆಗೆ ಜಮೆ ಮಾಡದೆ ಆರೋಪಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇಷ್ಟೇ ಅಲ್ಲದೆ, 30 ಹೊಸ ಕಿಯಾ ಕಾರುಗಳ ಮಾರಾಟದಲ್ಲಿಯೂ ಲೆಕ್ಕಪತ್ರಗಳ ವ್ಯತ್ಯಾಸ ಕಂಡುಬಂದಿದ್ದು, ಸಂಸ್ಥೆಗೆ ತಿಳಿಸಿದ ಮಾರಾಟದ ಮೊತ್ತ ಮತ್ತು ನೈಜ ಮಾರಾಟದ ಮೊತ್ತದ ನಡುವಿನ ವ್ಯತ್ಯಾಸದ ₹57.35 ಲಕ್ಷ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಹಳೆಯ ಹಾಗೂ ಹೊಸ ಕಾರುಗಳ ಮಾರಾಟದಲ್ಲಿ ಒಟ್ಟಾರೆ ₹2,73,25,014 ಹಣವನ್ನು ದುರ್ಬಳಕೆ ಮಾಡಿಕೊಂಡು ಸಂಸ್ಥೆಗೆ ಭಾರಿ ಆರ್ಥಿಕ ನಷ್ಟ ಉಂಟುಮಾಡಿದ್ದಾರೆ ಎಂಬುದು ದೂರುದಾರರ ಆರೋಪವಾಗಿದೆ.

ಅವ್ಯವಹಾರ ಕುರಿತು ಪ್ರಶ್ನಿಸಿದಾಗ ಆರೋಪಿಗಳು ಹಣ ಮರಳಿಸುವುದಾಗಿ ಒಪ್ಪಿಕೊಂಡು, 45 ದಿನಗಳೊಳಗೆ ಪಾವತಿಸುವ ಭರವಸೆಯನ್ನು ₹100 ಮೌಲ್ಯದ ಇ-ಸ್ಟಾಂಪ್‌ನಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಲಿಖಿತವಾಗಿ ನೀಡಿದ್ದರು. ಆದರೂ ಹಣ ವಾಪಸ್ ನೀಡದೆ ಸತಾಯಿಸಿದ್ದು, ಸೆಪ್ಟೆಂಬರ್ 26ರಿಂದ ದೂರವಾಣಿ ಕರೆಗಳಿಗೂ ಸ್ಪಂದಿಸದೆ ಸಂಪರ್ಕ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 316(4) ಹಾಗೂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

WhatsApp Image 2026 05 02 at 12.01.27 e1777704270988
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ಹುದ್ದೆಯಿಂದ...

ಗದಗ | ರಾಜ್ಯ ಸರ್ಕಾರ ಸಾರಿಗೆ ಬಸ್ ದರ ಹೆಚ್ಚಳ; ಸಿಪಿಐ(ಎಂ) ಖಂಡನೆ

"ಈಗಾಗಲೇ ಹಾಲಿನ ಬೆಲೆ ಏರಿಕೆ, ಅಕ್ಕಿ ಬೆಳೆ ಮತ್ತಿತರ ಜೀವನಾಗತ್ಯ ಸಾಮಗ್ರಿಗಳ...

ಉಡುಪಿ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ನ.7ರಂದು ಸಾಲಿಡಾರಿಟಿ ಸಮಾವೇಶ

ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ...

ಚಿಂತಾಮಣಿ ನಗರದ ಭವಿಷ್ಯ ಬದಲು ಮಾಡಲಿದೆ 850 ಎಕರೆ ಟೌನ್‌ಶಿಪ್ ಯೋಜನೆ!

ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ನಗರಾಭಿವೃದ್ಧಿ ಚಿಂತಾಮಣಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ...