ಕಲಬುರಗಿ | ಅಂಬೇಡ್ಕರ್ ಮೂರ್ತಿಗೆ ಅವಮಾನ ಪ್ರಕರಣ; ಆರೋಪಿತರ ಜಾಮೀನು ಅರ್ಜಿ ರದ್ದು

Date:

ಕಲಬುರಗಿಯಲ್ಲಿ ಕಳೆದ ಜನವರಿ 23ರಂದು ನಡೆದ ಅಂಬೇಡ್ಕರ್‌ ಪ್ರತಿಮೆಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ (ಎಸ್‌ಸಿ/ಎಸ್‌ಟಿ) ತಿರಸ್ಕರಿಸಿದೆ.

- Advertisement -

ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಮೂರ್ತಿಯ ಬಳಿ ಒಳ ಉಡುಪುಗಳನ್ನು ಎಸೆದಿರುತ್ತಾರೆ. ಜತೆಗೆ ಒಂದು ಹಾಳೆಯಲ್ಲಿ ಕೆಲವರ ಹೆಸರು ಮತ್ತು ಮೊಬೈಲ್‌ ಸಂಖ್ಯೆಯನ್ನು ನಮೂದಿಸಿದ್ದರು. ಹಣದ ಆಸೆಗಾಗಿ ಕೃತ್ಯ ಎಸಗಿರುವುದಾಗಿ ಚೀಟಿಯಲ್ಲಿ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚೀಟಿಯಲ್ಲಿದ್ದ ಹೆಸರುಗಳ ಆಧಾರದ ಮೇಲೆ ವಿಶ್ವವಿದ್ಯಾಲಯ ಪೋಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಎಸಿಪಿ ಸಬ್ ಅರ್ಬನ್ ಉಪ ವಿಭಾಗ ಡಿ ಜಿ ರಾಜಣ್ಣ ಅವರು ಪ್ರಕರಣ ನೋಂದಾಯಿಸಿಕೊಂಡು ತನಿಖೆ ಕೈಗೊಂಡು ಆರೋಪಿತರನ್ನು ದಸ್ತಗಿರಿ ಮಾಡಿದ್ದರು.

ಪ್ರಕರಣದ ಆರೋಪಿಗಳಾದ ಸಂಗಮೇಶ ಸುಭಾಷ ಪಾಟೀಲ್, ಕಿರಣ, ಹಣಮಂತ, ಮಾನು, ಶಿವಾಜಿನಗರ ಪಾಣೇಗಾಂವ್ ಎಂಬಾತರು ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ (ಎಸ್‌ಸಿ/ಎಸ್‌ಟಿ)ದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದದರು. ನ್ಯಾಯಾಲಯವು ಆರೋಪಿತರು ಹಾಗೂ ಪಿರ್ಯಾದುದಾರರ ವಾದ-ವಿವಾದಗಳನ್ನು ಆಲಿಸಿದ ಬಳಿಕ ಆರೋಪಿತರು ಅಪರಾಧ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಜತೆಗೆ ಪ್ರಕರಣವು ಇನ್ನೂ ತನಿಖಾ ಹಂತದಲ್ಲಿದ್ದ ಕಾರಣ ಆರೋಪಿತರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ

ಕಲಬುರಗಿ ಜಿಲ್ಲಾ ನ್ಯಾಯಾಲಯದ ಖ್ಯಾತ ವಕೀಲ ಲಿಂಗರಾಜ್ ಎಂ ಜಿ ಅವರು ದೂರುದಾರರ ಪರವಾಗಿ ವಾದ ಮಂಡಿಸಿದ್ದು, ರಾಷ್ಟ್ರನಾಯಕ ಬಾಬಾಸಾಹೇಬರ ಮೂರ್ತಿಗೆ ಅಪಮಾನವೆಸಗಿದ ಕಿಡಿಗೇಡಿಗಳ ಜಾಮೀನು ಅರ್ಜಿ ರದ್ದಾಗಲು ಶ್ರಮಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಭಾರಿ ವಿಶೇಷ ಸರ್ಕಾರಿ ಅಭಿಯೋಜಕ ರಾಜಮಹೇಂದರ ಜಿ ಅವರು ವಾದವನ್ನು ಮಂಡಿಸಿದರು.

ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು, ಕಲಬುರಗಿ ಜಿಲ್ಲಾ ವಕೀಲರ ಸಂಘ, ಕಲಬುರಗಿ ಜಿಲ್ಲಾ ಎಸ್‌ಸಿ/ಎಸ್‌ಟಿ ವಕೀಲರ ಸಂಘದ ಸಹಕಾರವು ಇರುತ್ತದೆ ಎಂದು ಅಶ್ವಿನಿ ಮದನಕರ್, ಆರತಿ ರಾಠೋಡ್, ಶ್ರೀ ರಮೇಶ ರಾಗಿ, ಧರ್ಮಣ್ಣ ಕೋನೆಕರ್, ವಿಜಯಕಾಂತ್ ರಾಗಿ, ಜಗನ್ನಾತ್ ಮಾಳಗೆ, ಮಲ್ಲಿಕಾರ್ಜುನ, ಜೆಡಿಆರ್ ಹಣಮಂತ ಬಾವಿಕಟ್ಟಿ ಒಗ್ಗೂಡಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...