ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ ಅಭಿಪ್ರಾಯಪಟ್ಟರು.
ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ ಭಾನುವಾರ ಡಾ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಒಕ್ಕೂಟ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅಂಬೇಡ್ಕರ್ ಅರಿವು(symbol of knowledge) ಎಂಬ ಒಂದು ದಿನದ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ಯುವಕರಿಗೆ ಹಾಗೂ ಮುಂದಿನ ನಮ್ಮ ತಲೆಮಾರಿನ ಜನತೆಗೆ ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳನ್ನು ಮುಟ್ಟಿಸಬೇಕಾದ ಜವಾಬ್ದಾರಿಗಳನ್ನು ಕುರಿತು ಉಪನ್ಯಾಸ ನೀಡಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ ಶಿಕ್ಷಕರು ಹಾಗೂ ಹಲವು ಸಾಧಕರನ್ನು ಸನ್ಮಾನಿಸಿದರು. ಈ ಕಾರ್ಯಾಗಾರದಲ್ಲಿ ಅನೇಕ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ಮಿಲಿಂದ ಸಾಗರ್
