ತೀವ್ರ ಹೃದಯಾಘಾತವಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸೇಡಂ ಪಟ್ಟಣದ ಸಿಮೆಂಟ್ ಕಾರ್ಖಾನೆಗೆ ಗೂಡ್ಸ್ ರೈಲು ತೆರಳಲು ರೈಲ್ವೆ ಗೇಟ್ ಹಾಕಿದ ಕಾರಣಕ್ಕೆ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತಲುಪುವಲ್ಲಿ ವಿಳಂಬವಾಗಿರುವುದರಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೇಡಂ ಪಟ್ಟಣದ ಪುನರ ಬಜಾರ್ ನಿವಾಸಿ ಮುಕ್ತಾರ ಪಾಷಾ (40) ಮೃತರು. ಮುಕ್ತಾರ್ ಪಾಷಾ ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್ ವಿಕ್ಷೀಸಲು ತೆರಳಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅಲ್ಲಿದ್ದವರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲಿಂದ ಕಲಬುರಗಿಗೆ ಹೋಗಲು ಹೇಳಿದ್ದರಿಂದ ಆಂಬುಲೆನ್ಸ್‌ನಲ್ಲಿ ತೆರಳುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಿದ್ದಲ್ಲಿ ವ್ಯಕ್ತಿ ಬದುಕುಳಿಯುತ್ತಿದ ಎಂದು ಹೇಳಲಾಗುತ್ತಿದ್ದು, ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆಯ ಎದುರು ಬುಧವಾರ ಸಂಜೆ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಕಾರ್ಖಾನೆಯ ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ ಕಾರ್ಖಾನೆ ಹಾಗೂ ರೈಲ್ವೆ ಇಲಾಖೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಈದಿನ ವರದಿಗೆ ಸ್ಪಂದಿಸಿದ ಸಿಎಂ ಕಚೇರಿ : ಸ್ವಚ್ಛವಾದ ಬೀದರ್‌ನ ʼಪಾಪನಾಶ ಕೆರೆʼ
ಮೃತ ಕುಟುಂಬಸ್ಥನ ಮನೆಯಲ್ಲಿ ಒಂದು ಸರ್ಕಾರಿ ನೌಕರಿ ಹಾಗೂ 50 ಲಕ್ಷ ರೂಪಾಯಿ ಪರಿಹಾರ ಹಾಗೂ ವಾಸವದತ್ತಾ ಸಿಮೆಂಟ್ ರೈಲ್ವೆ ಹಳಿ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
ಸಿಟಿಜನ್ ಜರ್ನಲಿಸ್ಟ್ : ಸುನೀಲ್ ರಾಣಿವಾಲ್ , ಸೇಡಂ,