ಕಲಬುರಗಿ | ಅನೈತಿಕ ಚಟುವಟಿಕೆಯ ತಾಣವಾದ ಆಂದೋಲಾ ಗ್ರಾಮದ ಶಿಕ್ಷಕರ ವಸತಿ ಗೃಹ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಿಕ್ಷಕರ ವಸತಿ ಇನ್ನೂ ಉದ್ಘಾಟನೆಯನ್ನೂ ಕಾಣಲಾಗಿಲ್ಲ. ಸರಿಯಾದ ನಿರ್ವಹಣೆಯೂ ಇಲ್ಲದೆ, ಅನೃತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಟ್ಟಿದೆ. 8 ಕೊಠಡಿಗಳು ಇರುವ ಈ ವಸತಿ ಗೃಹವನ್ನು 2018-19ರಲ್ಲಿ ನಿರ್ಮಾಣ ಮಾಡಲಾಗಿತ್ತು. ನಿರ್ಮಾಣಗೊಂಡ ಬಳಿಕ ಕಟ್ಟಡ ಸರ್ಕಾರದ್ದು ಎಂಬುದನ್ನು ಅಧಿಕಾರಗಳು ಮರೆತೇ ಬಿಟ್ಟಿದ್ದಾರೆ. ಅಲ್ಲದೆ, ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಕಾರಿ ನಡೆಸಲಾಗಿದೆ ಎಂಬ ಆರೋಪಗಳೂ ಇವೆ.

- Advertisement -

ಶಿಕ್ಷಕರ ವಸತಿ ಗೃಹವನ್ನು ಸುಮಾರು 80-90 ಲಕ್ಷ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಟ್ಟಡದ ಕಿಟಕಿ, ಬಾಗಿಲು, ಮೇಲ್ಛಾವಣಿಗಳು ಕಳಪೆ ಕಾಮಗಾರಿಯನ್ನು ಪ್ರದರ್ಶಿಸುತ್ತಿವೆ. ಅವೆರಲ್ಲವೂ ಕುಸಿದು ಬೀಡುವ ಅವಸ್ಥೆಗೆ ತಲುಪಿವೆ. ಕಿಡಿಗೇಡಿಗಳು ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ವಿದ್ಯುತ್ ಸಂಪರ್ಕ ಕೂಡ ಇಲ್ಲ. ಸುತ್ತಮುತ್ತ ಜಾಲಿ ಕಂಟಿ ಬೆಳೆದು ನಿಂತಿವೆ. ಹಂದಿಗಳು ತಮ್ಮ ವಾಸಸ್ಥಾನ ಮಾಡಿಕೊಂಡಿವೆ. ಕಟ್ಟಡ ಸಮಸ್ಯೆ ಮತ್ತು ಬಳಕೆಯ ಬಗ್ಗೆ ‘ದಲಿತ ಸೇನೆ’ ಮುಖಂಡರು ಹಲವಾರು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ಅದರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
WhatsApp Image 2023 09 03 at 5.51.23 PM

ಕತ್ತಲಾಗುತ್ತಿದ್ದಂತೆ ಇಲ್ಲಿ ಕುಡುಕರ ದಂಡೇ ಸೇರುತ್ತದೆ. ಜೂಜು ಸೇರಿದಂತೆ ಅನೈತಿಕ ಚಟುವಟಿಗಳು ನಡೆಯುತ್ತವೆ. ಇದರಿಂದಾಗಿ, ಸುತ್ತಮುತ್ತಲ ಜನರು, ವಿದ್ಯಾರ್ಥಿಗಳು, ಶಿಕ್ಷಕರು ಅಸಮಾಧಾನಗೊಂಡಿದ್ದಾರೆ.

ಸರ್ಕಾರದ ಹಣ ಅನಾವಶ್ಯಕವಾಗಿ ಪೋಲಾಗುತ್ತಿದೆ. ಇದನ್ನು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಕಟ್ಟಡವನ್ನು ದುರಸ್ತಿಗೊಳಿಸಿ, ಶಿಕ್ಷಕರ ಬಳಕೆಗೆ ಒದಗಿಸಬೆಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಶಿಕ್ಷಕ ವಸತಿ ಗೃಹ ಉದ್ಘಾಟನೆಗೊಳ್ಳದೇ, ಹೊಸ ಕಟ್ಟಡ ಪಾಳು ಬಿದ್ದಿರುವ ಕುರಿತು ಈದಿನ.ಕಾಮ್ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಗಳಿಗೆ ಸುಮಾರು ಬಾರಿ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ, ಅವರು ಕರೆ ಸ್ವೀಕರಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...