ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿಯಲ್ಲಿ KKRDB ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರ ನಿವಾಸದ ಎದುರು ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನಗಳ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಈ ವೇಳೆ, ರೇಹಮತ್ ನಗರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜೈರುನೀಶಾ ಅವರು ಬಿಸಿಲಿನ ತಾಪದಿಂದ ಅಸ್ವಸ್ಥಗೊಂಡಿದ್ದು, ಮೂರ್ಛೆ ಹೋಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಧರಣಿ ಮುಂದುವರೆಸಿದ್ದಾರೆ.