ಕಲಬುರಗಿ | ಆಡಳಿತ ಅಧಿಕಾರಿಗಳ ವಿರುದ್ಧ ಪೌರಕಾರ್ಮಿಕರ ಅಕ್ರೋಶ; ರಸ್ತೆತಡೆದು ಪ್ರತಿಭಟನೆ

Date:

Advertisements

ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅಧಿಕಾರಿಗಳು ಪೌರಕಾರ್ಮಿಕರ ಸಮಸ್ಯೆಗೆ ಸ್ಪಂದಿಸದೆ ಇರುವುದರಿಂದ ಅಧಿಕಾರಿಗಳ ವಿರುದ್ಧ ರಸ್ತೆತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಸಮಸ್ಯೆಗೆ ಪರಿಹಾರ ಒದಗಿಸುವವರೆಗೆ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮುಂದುವರೆಸುತ್ತೇವೆಂದು ಪಟ್ಟುಹಿಡಿದ ಪೌರಕಾರ್ಮಿಕರು ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕೆ ನೀಲಾ ಮೀನಾಕ್ಷಿ ಬಾಳಿ

ಪ್ರತಿಭಟನೆ ಬೆಂಬಲಿಸಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಮಾತನಾಡಿ. “ಪೌರಕಾರ್ಮಿಕರ ಸಮಸ್ಯೆಗಳು ಕಳೆದ ಅನೇಕ ವರ್ಷಗಳಿಂದ ಒಂದಲ್ಲ ಒಂದು ಸ್ವರೂಪದಲ್ಲಿ ಹೆಚ್ಚಾಗುತ್ತಲೇ ಇವೆ. ಅವರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಹಾನಗರಪಾಲಿಕೆ ಮತ್ತು ಜಿಲ್ಲಾಡಳಿತ ತೀವ್ರ ನಿರ್ಲಕ್ಷ್ಯ ಹೊಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ” ಎಂದು ದೂರಿದರು.

Advertisements
ಪೌರಕಾರ್ಮಿಕರ ಪ್ರತಿಭಟನೆ ಕಲಬುರಗಿ

“ಕಲಬುರಗಿ ನಗರವು ದಿನೇ ದಿನೆ ಬೆಳೆಯುತ್ತಲೇ ಇದೆ. ನಗರವನ್ನು ಆರೋಗ್ಯಪೂರ್ಣವಾಗಿಡುವಲ್ಲಿ ಪೌರಕಾರ್ಮಿಕರ ಶ್ರಮವೇ ಪ್ರಧಾನವಾದದ್ದು. ಆದರೆ ಇದನ್ನು ಆಡಳಿತ ವರ್ಗವು ಆಧ್ಯತೆಯಾಗಿ ಪರಿಗಣಿಸುತ್ತಿಲ್ಲ. ಪೌರಕಾರ್ಮಿಕರಲ್ಲಿ ದಲಿತ ದಮನಿತ ಜನಸಮುದಾಯವೇ ಇರುವುದನ್ನು ಗಮನಿಸಬೇಕು. ಕೋವಿಡ್ ಸಮಯದಲ್ಲಿ ಪೌರಕಾರ್ಮಿಕರ ಶ್ರಮವು ಯಾವುದಕ್ಕೂ ಸಾಟಿಯಿಲ್ಲದ್ದು, ಜೀವದ ಹಂಗು ತೊರೆದು ನಗರದ ಜನತೆಯ ಆರೋಗ್ಯ ಕಾಪಾಡಿದ್ದು ಇದೇ ಪೌರಕಾರ್ಮಿಕರು, ಆದರೆ ಇವರ ಸಮಸ್ಯೆಗಳು ಬಂದಾಗ ಪರಿಹರಿಸುವಲ್ಲಿ‌ ಸರ್ಕಾರವು ಆಸಕ್ತಿ ಹೊಂದಿದ್ದರೆ ಈಗ ಉದ್ಭವವಾದ ಸಮಸ್ಯೆಗಳು ಬಹಳ ಬೇಗ ಪರಿಹಾರಗೊಳ್ಳುತ್ತಿದ್ದವು” ಎಂದು ಸರ್ಕಾರಕ್ಕೆ ತಾಕೀತು ಮಾಡಿದರು.

“ಎಲ್ಲ ಪೌರ ಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸಬೇಕು. ಇನ್ನೂ ಅಗತ್ಯವಿರುವ ಪೌರಕಾರ್ಮಿಕರ ನೇಮಕಾತಿ ಮಾಡಿಕೊಳ್ಳಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸುವವರೆಗೆ ಎಲ್ಲ ಪೌರಕಾರ್ಮಿಕರ ಮಾಸಿಕ ವೇತನವು ವಿಳಂಬವಿಲ್ಲದೆ ನಿಗದಿಯಾಗಿದ್ದಷ್ಟು ಪ್ರತಿ ತಿಂಗಳು ಪೂರ್ಣ ಪಾವತಿ ಮಾಡಬೇಕು. ನೇರ ಪಾವತಿಯಡಿ ಕಾರ್ಮಿಕರಿಗೆ ವೇತನ ಪಾವತಿಯಾಗಬೇಕು. ಮಾಸಿಕ ₹31,000 ಕನಿಷ್ಠ ಕೂಲಿ ಸಿಗುವಂತಾಗಬೇಕು” ಎಂದು ಒತ್ತಾಯಿಸಿದರು.

“ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಕೂಡಲೇ ಜಂಟಿಸಭೆ ನಡೆಸಿ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿಕೊಂಡು ನೇಮಕಾತಿ ಆದೇಶವನ್ನು ಜಾರಿಗೊಳಿಸಬೇಕು. ಸರ್ಕಾರವೇ ನೇಮಕಾತಿಗಾಗಿ ಆದೇಶ ಮಾಡಿದರೂ ಆನೇಕ ವರ್ಷಗಳಿಂದ ತಟಸ್ಥಗೊಳಿಸಿದ್ದು ಅಕ್ಷಮ್ಯವಾದ ನಡೆಯಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ನೇಮಕಾತಿಯ ಅಧಿಕಾರವು ಮಹಾನಗರಸಭೆಯ ಆಯುಕ್ತರಿಗಿದೆ ಎಂಬುದು ಸರ್ಕಾರದ ಆದೇಶವಾಗಿದೆ. ಇದು ಜಾರಿಯಾಗಬೇಕು”‌ ಎಂದು ಆಗ್ರಹಿಸಿದರು.

“ಪೌರಕಾರ್ಮಿಕರೊಂದಿಗೆ ಸರ್ಕಾರ ಕೂಡಲೇ ಮಾತುಕತೆಗೆ ಮುಂದಾಗಿ ಅವರ ಅಹವಾಲುಗಳನ್ನು ಆಲಿಸಿ ಬೇಡಿಕೆಗಳನ್ನು ಪರಿಹರಿಸಬೇಕು. ಸೇವಾ ಹಿರಿತನ ಆಧಾರಿತ ಹಾಗೂ ಆರು ತಿಂಗಳಿಗೊಮ್ಮೆ ತುಟ್ಟಿ ಭತ್ಯೆ ನೀಡಬೇಕು” ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಉಪಯೋಗವಾಗದ ಅಂಡರ್ ಪಾಸ್; ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ

ಈ ಸಂದರ್ಭದಲ್ಲಿ ಡಾ. ಮಿನಾಕ್ಷಿ ಬಾಳಿ, ಶ್ರೀಮಂತ ಬಿರಾದಾರ, ಶರಣಬಸಪ್ಪ ಮಮಶೆಟ್ಟಿ, ಸುಧಾಮ ಧನ್ನಿ, ವಿರೂಪಾಕ್ಷಪ್ಪ ತಡಕಲ್, ಮೇಘರಾಜ ಕರಾಠೆ, ಪಾಂಡುರಂಗ ಮಾವಿನಕರ್, ಚಂದಮ್ಮ ಮಾವಿನಕರ್ ಸೇರಿದಂತೆ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X