ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

Date:

ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯ, ಪಾರದರ್ಶಕ ತನಿಖೆ ಹಾಗೂ ಸಂವಿಧಾನಾತ್ಮಕ ಹೊಣೆಗಾರಿಕೆಗೆ ಆಗ್ರಹಿಸಿ ವಿವಿಧ ಮಹಿಳಾ ಮತ್ತು ಸಾಮಾಜಿಕ ಸಂಘಟನೆಗಳ ಮುಖಂಡರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

2022ರ ಸೆಪ್ಟೆಂಬರ್‌ನಲ್ಲಿ ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣ ದೇಶಾದ್ಯಂತ ಆಕ್ರೋಶ ಮೂಡಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಗಂಭೀರ ಆರೋಪಗಳು ಹಾಗೂ ಹಲವು ಬಗೆಹರಿಯದ ಪ್ರಶ್ನೆಗಳ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಕುಟುಂಬ ನ್ಯಾಯಕ್ಕಾಗಿ ಹೋರಾಟ ಮುಂದುವರಿಸಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬರಿಗೆ ಸಿಕ್ಕಿಂ ರಾಜ್ಯಪಾಲರಂತಹ ಸಂವಿಧಾನಾತ್ಮಕ ಹುದ್ದೆ ನೀಡಿರುವ ಕುರಿತು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದವು. ಈ ವಿಚಾರದಲ್ಲಿ ರಾಷ್ಟ್ರಪತಿಗೆ ಪ್ರತ್ಯೇಕ ಮನವಿ ಸಲ್ಲಿಸಿ ಸೂಕ್ತ ಸಂವಿಧಾನಾತ್ಮಕ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ನಿರ್ಧರಿಸಿರುವುದಾಗಿ ತಿಳಿಸಿದವು.

Advertisements

ಅಂಕಿತಾ ಭಂಡಾರಿ ಪ್ರಕರಣದ ಕುರಿತು ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಸ್ವತಂತ್ರ ಪರಿಶೀಲನೆ ನಡೆಸಬೇಕು. ರಾಜಕೀಯ ಪ್ರಭಾವದಿಂದ ನ್ಯಾಯ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಸಂವಿಧಾನಾತ್ಮಕ ಹುದ್ದೆಗಳನ್ನು ಅಲಂಕರಿಸುವವರು ಸಾರ್ವಜನಿಕ ವಿಶ್ವಾಸ ಮತ್ತು ನೈತಿಕ ಹೊಣೆಗಾರಿಕೆಯ ಉನ್ನತ ಮಾನದಂಡಗಳನ್ನು ಪಾಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಯಾರನ್ನೂ ತಪ್ಪಿತಸ್ಥರೆಂದು ಪೂರ್ವನಿರ್ಧರಿಸುವುದು ತಮ್ಮ ಉದ್ದೇಶವಲ್ಲ. ಪ್ರತಿಯೊಬ್ಬರಿಗೂ ಕಾನೂನು ಪ್ರಕ್ರಿಯೆಯಡಿ ನ್ಯಾಯ ದೊರೆಯಬೇಕು. ಆದರೆ, ಗಂಭೀರ ಸಾರ್ವಜನಿಕ ಆರೋಪಗಳನ್ನು ನಿರ್ಲಕ್ಷಿಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

“ಅಂಕಿತಾ ಭಂಡಾರಿ ಉತ್ತರಾಖಂಡದ ಮಗಳಷ್ಟೇ ಅಲ್ಲ, ಭಾರತದ ಮಗಳು. ಆಕೆಗೆ ನ್ಯಾಯ ದೊರಕಿಸುವುದು ಮಹಿಳೆಯರ ಘನತೆ, ಸುರಕ್ಷತೆ ಮತ್ತು ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದೆ. ಅಂಕಿತಾ ಕುಟುಂಬಕ್ಕೆ ಸತ್ಯ ತಿಳಿಯಬೇಕು, ನ್ಯಾಯ ದೊರೆಯಬೇಕು ಹಾಗೂ ಸಾರ್ವಜನಿಕ ಜೀವನದಲ್ಲಿ ಹೊಣೆಗಾರಿಕೆ ಖಚಿತವಾಗಬೇಕು” ಎಂದು ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಅಸ್ಪೃಶ್ಯತೆ ಆಚರಣೆ: 13 ಮಂದಿ ವಿರುದ್ಧ ಪ್ರಕರಣ ದಾಖಲು, ಜಿಲ್ಲಾಧಿಕಾರಿ, ಎಸ್‌ಪಿ ನೇತೃತ್ವದಲ್ಲಿ ಶಾಂತಿ ಸಭೆ

ಪ್ರತಿಭಟನೆಯಲ್ಲಿ ವಾಯ್ಸ್ ಆಫ್ ವಿಮೆನ್ಸ್ ಕಲಬುರಗಿ ಅಧ್ಯಕ್ಷೆ ಶಹನಾಜ್ ಅಖ್ತರ್, ಇರಫಾನಾ ಪರ್ವೀನ್, ಅನುರಾಧಾ ಎಸ್. ನೈನ್, ಶಶಿಕಲಾ, ನಸೀಮಾ ಬಾನು, ಶಿಫಾ ಮಹಿಳಾ ಸೊಸೈಟಿ ಅಧ್ಯಕ್ಷೆ ತಹೇನಿಯತ್ ಫಾತಿಮಾ, ಜನ ವಿಕಾಸ ಫೌಂಡೇಶನ್ ಕಲಬುರಗಿ ಅಧ್ಯಕ್ಷೆ ಶಾಹೀನ್ ಬೇಗಂ, ಉಪಾಧ್ಯಕ್ಷೆ ಮಶಾಖ್ ಪಟೇಲ್, ಅಂಬೇಡ್ಕರ್ ಸೇನೆಯ ಶೀಲಾ ಗಾಯಕ್ವಾಡ್, ಗೌತಮಿ ಮೈಲ್ಕಾರಿ, ಅನಿತಾ ಮಠಿ ಮೂಡ್, ಶೋಭಾ ಕಾಂಬ್ಳೆ, ಕಲ್ಪನಾ ಗುಡೂರು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷೆ ಫಾತಿಮಾ, ಶಾಹೀನ್ ಸುಲ್ತಾನಾ, ರೇಷ್ಮಾ ರಶೀದಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಳೆ ಲೋಕಾಯುಕ್ತ ಬಿ.ಎಸ್.ಪಾಟೀಲ ಜಿಲ್ಲಾ ಪ್ರವಾಸ

"ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ನವೆಂಬರ್ 5 ರಂದು...

ಬಾಗಲಕೋಟೆ | ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಗಜಾನನ ಬಾಲೆ

ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ...

ಶಿವಮೊಗ್ಗ | ಪೋಷಕರಾಗಲು ಅಡ್ಡದಾರಿಯಲ್ಲ; ಕಾನೂನು ಬದ್ಧ ದತ್ತು ಸ್ವೀಕಾರವೇ ಸರಿಯಾದ ಮಾರ್ಗ

ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಯಾವುದೇ ಅನಧಿಕೃತವಾಗಿ ಮಗುವನ್ನು ನೀಡುವುದು...

ಹಾವೇರಿ | ರದ್ದಾದ ಮೀಸಲಾತಿಗೆ ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಮನವಿ

"ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...