ಕಲಬುರಗಿ | ಕೃಷಿ ಸಾಲದ ಬಿಕ್ಕಟ್ಟಿಗೆ ಮತ್ತೊಂದು ಜೀವ ಬಲಿ; ಯುವ ರೈತ ಆತ್ಮಹತ್ಯೆ

Date:

ಬೆಳೆಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ಸಾಲಗಾರರ ಒತ್ತಡದಿಂದ ಮನನೊಂದ ಆಳಂದ ತಾಲ್ಲೂಕಿನ ಬೆಣ್ಣೆಶಿರೂರ ಗ್ರಾಮದ 19 ವರ್ಷದ ಯುವ ರೈತ ಯಲ್ಲಾಲಿಂಗ ಬಂಡಗರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

- Advertisement -

ಯಲ್ಲಾಲಿಂಗ ಅವರು ತಂದೆ ಕಾಶಿನಾಥ ಅವರೊಂದಿಗೆ ಇತರರ ಜಮೀನುಗಳನ್ನು ಪಡೆದು ಕೃಷಿ ಮಾಡುತ್ತಿದ್ದರು. ಕುಟುಂಬದ ಹೆಸರಿನಲ್ಲಿ ಮಾಡಿಯಾಳ ಗ್ರಾಮದ ಕೆಜಿಬಿ ಬ್ಯಾಂಕಿನಲ್ಲಿ ₹1.35 ಲಕ್ಷ ಸಾಲವಿದ್ದು, ಖಾಸಗಿಯವರ ಬಳಿಯೂ ಲಕ್ಷಾಂತರ ರೂಪಾಯಿ ಸಾಲ ಮಾಡಲಾಗಿತ್ತು. ಇತ್ತೀಚೆಗೆ ಗ್ರಾಮೀಣ ಬ್ಯಾಂಕಿನಿಂದ ಸಾಲ ಮರುಪಾವತಿಸುವಂತೆ ಕಾನೂನು ನೋಟಿಸ್ ಬಂದಿದ್ದರಿಂದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಹಿನ್ನೆಲೆ ಮನನೊಂದ ಯಲ್ಲಾಲಿಂಗ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮೊದಲು ಆಲಮೇಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಸೂಕ್ತ ಚಿಕಿತ್ಸೆ ಸೌಲಭ್ಯ ಇಲ್ಲದ ಕಾರಣ ವಿಜಯಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ರೈತ ಮುಖಂಡ ಭೀಮಾಶಂಕರ ಮಾಡಿಯಾಳ ತಿಳಿಸಿದ್ದಾರೆ.

ಘಟನೆಯ ಕುರಿತು ನಿಂಬರ್ಗಾ ಠಾಣೆ ಪೊಲೀಸರು ವಿಜಯಪುರಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಬಸನಗೌಡ ಮರ್ಕಲ್ ಸಾವಿನ ಬೆನ್ನಲ್ಲೇ ವೈರಲ್ ವಿಡಿಯೋ; ಹೇಮರೆಡ್ಡಿ ಮಲ್ಲಮ್ಮ ಸಹಕಾರಿ ಸಂಘದ ಪ್ರಕರಣಕ್ಕೆ ಹೊಸ ತಿರುವು

ಈ ಘಟನೆ ಮತ್ತೆ ರೈತರ ಆರ್ಥಿಕ ಸಂಕಷ್ಟ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದ ಸಮಸ್ಯೆ ಹಾಗೂ ಸಾಲದ ಒತ್ತಡದ ಗಂಭೀರತೆಯನ್ನು ಬೆಳಕಿಗೆ ತಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...