ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

Date:

ಕಲಬುರಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಸೇಡಂ  ಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

- Advertisement -

ಮಾಜಿ ಪ್ರಧಾನ ಮಂತ್ರಿ ದೇವೆಗೌಡರ ಬೆಂಗಳೂರಿನ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, “ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಬೆಳೆ ಬಾರದೆ ರೈತರು ತೊಂದರೆ ಅನುಭವಿಸುವಂತಾಗಿದೆ. ಬರ ಘೋಷಣೆಯಾದರೂ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಲು ಮುಂದೆ ಬರುತ್ತಿಲ್ಲ. ಹಾಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ ಒಂದು ತಿಂಗಳು ಕಳೆದಿದೆ. ಬರಗಾಲ ಪೀಡಿತ ಪ್ರದೇಶಗಳಲ್ಲಿ ಕೇಂದ್ರದ ತಂಡ ಸಮೀಕ್ಷೆ ಮಾಡುತ್ತಿದೆ. ಆದರೆ ಇದು ವಿಳಂಬಕ್ಕೆ ಕಾರಣವಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಿದರೆ ನಮ್ಮ ಭಾಗದ ರೈತರಿಗೆ ಅನೂಕೂಲವಾಗಲಿದೆ” ಎಂದು ಹೇಳಿದರು.

“ಸರ್ಕಾರ ಈಗಾಗಲೇ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು, ಕೃಷಿ ಸಚಿವರೂ ಕೂಡ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಸಚಿವರೂ ಕೂಡ ಬೆಳೆ ವೀಕ್ಷಿಸಿದ್ದಾರೆ. ಹೆಸರು, ಉದ್ದು, ಎಳ್ಳು, ಸೋಯಾಬೀನ್ ಮುಂತಾದ ಮುಂಗಾರು ಬೆಳೆಗಳು ಮಳೆ ಬಾರದೆ ಹಾಳಾಗಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ಈವರೆಗೆ ಬೆಳೆಯಿಂದ ಒಂದು ರೂಪಾಯಿ ಕೂಡ ಕಂಡಿಲ್ಲ. ಸಾಲ ಮಾಡಿ ಬಿತ್ತನೆ ಬೀಜ ಮತ್ತು ಗೊಬ್ಬರ ಖರೀದಿಸಿದ್ದಾರೆ. ಸಾಲ ಮರುಪಾವತಿಗೆ ಹಣವಿಲ್ಲ. ಮಳೆ ಬಂದಿದ್ದರೆ ಈಗಾಗಲೇ ರೈತರ ಕೈಗೆ ಹಣ ಬರುತ್ತಿತ್ತು. ಪರಿಸ್ಥಿತಿ ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದ ಖಜಾನೆ ಖಾಲಿ ಮಾಡುತ್ತಿದ್ದಾರೆ. ಆದರೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ” ಎಂದು ಆರೋಪಿಸಿದರು.

“ರೈತರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬರ ಪರಿಹಾರ ನೀಡುವಂತೆ ತಾವು ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ಅನೂಕುಲ ಮಾಡಿಕೊಡಬೇಕು” ಎಂದು ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ರೈತನ ಮೇಲೆ ಕರಡಿಗಳ ದಾಳಿ; ಅರಣ್ಯ ಇಲಾಖೆಯೇ ಚಿಕಿತ್ಸೆ ವೆಚ್ಚ ಭರಿಸುವಂತೆ ಒತ್ತಾಯ

“ಕಲಬುರಗಿ ಜಿಲ್ಲೆ ಸೇರಿದಂತೆ ಸೇಡಂ ಮತಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಇಂದರಿಂದ ರಾತ್ರಿಯ ತುರ್ತು ಪರಿಸ್ಥಿತಿ ವೇಳೆ ಚಿಕಿತ್ಸೆ ಸಿಗದೆ ಸಾವುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈದ್ಯ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...