ಕಲಬುರಗಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 55 ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಸರ್ಕಾರದ ಆದೇಶದಂತೆ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿನ ಖಾಲಿ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಉತ್ತೀರ್ಣರಾಗಿರುವ 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜುಲೈ 1ರಿಂದ ಜುಲೈ 31, 2026ರ ಸಂಜೆ 5.30ರವರೆಗೆ (ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಚಿಂಚೋಳಿಗೆ ಖುದ್ದಾಗಿ ಸಲ್ಲಿಸಬೇಕು.

ಇದನ್ನು ಓದಿದ್ದೀರಾ? ಕಲಬುರಗಿ | ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...