ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ನ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ ಹಾಗೂ ಸಿಬಿಎಸ್ಇ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು
ಜುಲೈ 31 ಕೊನೆಯ ದಿನವಾಗಿದೆ ಎಂದು ಪ್ರಾಚಾರ್ಯ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಕಡೇಚೂರು ಜಿಟಿಟಿಸಿಯಲ್ಲಿ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ; ಅರ್ಜಿ ಆಹ್ವಾನ
ಪ್ರವೇಶಾತಿ ಹಾಗೂ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 9945350274, 9449534169, 9880874609 ಹಾಗೂ 9008065554 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.






