ಕಲಬುರಗಿ | ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅರ್ಜಿ ಸಲ್ಲಿಕೆ; ಆಗಸ್ಟ್ 31 ಅಂತಿಮ ದಿನ

Date:

ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅರ್ಜಿ ಸಲ್ಲಿಸಲು ಆಗಸ್ಟ್ 31 ಅಂತಿಮ ದಿನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೀಕ್ಷಾಭೂಮಿ ಯಾತ್ರೆಗೆ ಹೋಗಬಯಸುವ ಅರ್ಹ ಅಭ್ಯರ್ಥಿಗಳು https://swdservices.karnataka.gov.in/ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕೆಂದು ಸೇಡಂನ ಗೈಡ್ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಪತ್ರಿಕೆ ಪ್ರಕಟಣೆ ತಿಳಿಸಿರುವ ಅವರು, “2024-25ನೇ ಸಾಲಿನಲ್ಲಿ ಅಕ್ಟೋಬರ್ 12(ವಿಜಯದಶಮಿ ಶನಿವಾರ)ರಂದು ನಾಗಪುರ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 10 ರಿಂದ 14ರವರೆಗೆ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯದಿಂದ ಡಾ. ಬಿ ಆ‌ರ್ ಅಂಬೇಡ್ಕರ್‌ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಾಗಪೂರ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳಲು ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ. ಈ ಸಂಬಂಧ ಅರ್ಹ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಬಹುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ದೀಕ್ಷಾಭೂಮಿ ಯಾತ್ರೆಗೆ ಹೋಗಬಯಸುವ ಡಾ. ಬಿ ಆರ್ ಅಂಬೇಡ್ಕರ್‌ ಅವರ ಅನುಯಾಯಿಗಳು ಬಿಪಿಎಲ್ ಕಾರ್ಡ್‌ ಹೊಂದಿರಬೇಕು. 18 ವರ್ಷ ವಯೋಮಿತಿ ಮೇಲ್ಪಟ್ಟವರು ಮತ್ತು ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಜತೆಗೆ ಇಲಾಖೆಯು ವಿಧಿಸುವ ಷರತ್ತುಗಳನ್ನು ಪಾಲಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

“ಆಸಕ್ತರು ಅಂತಿಮ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿಯ ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕರ ಕಾರ್ಯಾಲಯಕ್ಕೆ ಸಂಪರ್ಕಿಸಲು ಕೋರಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...