ಕೊಲೆ ಯತ್ನ ಪ್ರಕರಣವೊಂದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಕಲಬುರಗಿಯ ರೋಜಾ ಠಾಣೆಯ ಪೊಲೀಸರು 32 ವರ್ಷಗಳ ಬಳಿಕ ಬಂಧಿಸಿದ್ದಾರೆ.
ಬಷೀರುದ್ದೀನ್ ಮಶಾಕ್ ಪಟೇಲ್ (65) ಬಂಧಿತ ಆರೋಪಿ.
1993ರಲ್ಲಿ ಕೊಲೆ ಯತ್ನದ ಪ್ರಕರಣದ ಆರೋಪಿಯಾಗಿದ್ದ ಬಷೀರುದ್ದೀನ್ 32 ವರ್ಷಗಳಿಂದ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ ಎನ್ನಲಾಗಿದೆ. ಇತ್ಯರ್ಥವಾಗದೆ ಉಳಿದಿರುವ ಪ್ರಕರಣಗಳಲ್ಲಿನ ಆರೋಪಿಗಳ ಪತ್ತೆಗೆ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅವರು ವಿಶೇಷ ಕಾರ್ಯಾಚರಣೆ ನಡೆಸಿದ್ದರು.
ಹೈದರಾಬಾದ್‌ನ ಆಸಿಫ್ ನಗರದಲ್ಲಿ ತಲೆಮರೆಸಿಕೊಂಡಿದ್ದ ಬಷೀರುದ್ದೀನ್ ಮಶಾಕ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.