ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾಯಂ ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ತಯಬ ಸುಲ್ತಾನ್ ಹಿರಿಯ ಶ್ರೇಣಿ ನ್ಯಾಯಾಧೀಶರು, ಪ್ರಥಮ ದರ್ಜೆ ನಾಯಕ ದಂಡಾಧಿಕಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಸಾರ್ವಜನಿಕ ಅನುಕೂಲಕ್ಕಾಗಿ ವಿದ್ಯುತ್ ಸರಬರಾಜು, ನೀರಿನ ಕರ ಸೇರಿದಂತೆ ಬ್ಯಾಂಕ್, ಟೆಲಿಫೋನ್ ಬಿಲ್, ಆಸ್ಪತ್ರೆಗಳಲ್ಲಿನ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಬಗೆಹರಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ
ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶರಾದ ಕಾಶಿನಾಥ್ ಮತ್ತು ಪ್ರಥಮ ದರ್ಜೆ ನಾಯಕ ದಂಡಾಧಿಕಾರಿಗಳು ಸೇರಿದಂತೆ ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗವೇಣಿ ದನ್ನಾ ಮತ್ತು ಬಸಲಿಂಗಮ್ಮ, ನ್ಯಾಯಾಲಯದ ಸಿಬ್ಬಂದಿ ವರ್ಗ ಇದ್ದರು.