ಕಲಬುರಗಿ | ಏಳು ತಿಂಗಳು ಕಳೆದರೂ ಬಾರದ ಬಿ.ಇಡಿ ಫಲಿತಾಂಶ : ವಿದ್ಯಾರ್ಥಿಗಳ ಪ್ರತಿಭಟನೆ

Date:

2024–25ನೇ ಸಾಲಿನ ಬಿ.ಇಡಿ ಅಂತಿಮ ವರ್ಷದ ನಾಲ್ಕನೇ ಸೆಮಿಸ್ಟರ್ ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಬೇಕು ಹಾಗೂ ಮೂಲ ಅಂಕಪಟ್ಟಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿ.ವಿ.ಯ ಕುಲಪತಿಗಳ ಕಚೇರಿ ಎದುರು ಶುಕ್ರವಾರ ಎರಡು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂಬಂಧ ಪ್ರಭಾರ ಕುಲಪತಿ ಪ್ರೊ.ಗೂರು ಶ್ರೀರಾಮುಲು ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು. ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್ ಹಾಜರಿದ್ದರು

ಅಂತಿಮ ವರ್ಷದ ಬಿ.ಇಡಿ ನಾಲ್ಕನೇ ವರ್ಷದ ಸೆಮಿಸ್ಟರ್ ಪರೀಕ್ಷೆ ಬರೆದು ಏಳು ತಿಂಗಳು ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ. ಇದರಿಂದಾಗಿ ಬಿ.ಇಡಿ ವೃತ್ತಿ ಶಿಕ್ಷಣ ಪಡೆದು ಶಿಕ್ಷಕರಾಗುವ ಆಕಾಂಕ್ಷೆಯನ್ನು ಹೊತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ದೂರಿದರು.

1003911151

‘ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶ ಮತ್ತು ಅಂಕಪಟ್ಟಿಗಾಗಿ ಚಾತಕ ಪಕ್ಷಿಯಂತೆ ಕಾಯುವ ಸ್ಥಿತಿ ಬಂದಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ವೃತ್ತಿ ಪರೀಕ್ಷೆ ತೆಗೆದುಕೊಂಡರೂ 45 ದಿನಗಳ ಒಳಗೆ ಫಲಿತಾಂಶ ಪ್ರಕಟಿಸಬೇಕೆಂಬ ನಿಯಮವಿದೆ. ಆದರೆ, ಗುಲಬರ್ಗಾ ವಿಶ್ವವಿದ್ಯಾಲಯವು ಈ ನಿಯಮವನ್ನು ಕಡೆಗಣಿಸಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು 2024–25ನೇ ಸಾಲಿನ ನಾಲ್ಕನೇ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

‘ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿ ವಿತರಿಸಬೇಕು. ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು. ಅಕ್ರಮ ಅಂಕಪಟ್ಟಿ ನೀಡುವ ಮತ್ತು ಅಂಕಪಟ್ಟಿ ತಿದ್ದುವ ದಂಧೆಗೆ ಕಡಿವಾಣ ಹಾಕಬೇಕು. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು, ಘಟಿಕೋತ್ಸವ ಪ್ರಮಾಣಪತ್ರವನ್ನೂ ಶೀಘ್ರ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಬೆರಗು ಹುಟ್ಟಿಸುವ ಕಲ್ಯಾಣದ ಅನುಭವ ಮಂಟಪ : ಕಥೆಗಾರ ಮಹಾಂತೇಶ ನವಲಕಲ್

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಸಂಚಾಲಕ ತೇಜಸ್ ಆರ್. ಇಬ್ರಾಹಿಂಪುರ, ವಿದ್ಯಾರ್ಥಿಗಳಾದ ಪ್ರಭಾಕರ ಚಿಂಚೋಳಿ, ಗಣೇಶ ಯಾದವ್, ಜೈಭೀಮ, ಪೂಜಾ ಡೊಮನಾಳ, ಸಚಿನ್, ನಾಗೇಶ್, ಯುವ ಹೋರಾಟಗಾರರಾದ ಜಗನ್ನಾಥ ಎಚ್.ಎಸ್, ಈಶ್ವರ ಕುಂಬಾರ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...