ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು, ಆಳಂದ ಶಾಸಕ ಬಿ.ಆರ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಜಗಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಗ್ಗೂಡಿಸಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದರುʼ ಎಂದರು.
ʼವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕರು, ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ ದೇಶದಲ್ಲಿ ಜಾತಿ, ಬೇಧ, ಅಸಮಾನತೆ, ಗಂಡು, ಹೆಣ್ಣು ಎಂಬ ತಾರತಮ್ಯ ಇರುತ್ತಿರಲಿಲ್ಲ. ಸತ್ಯ ಮಾರ್ಗದಲ್ಲಿ ನಡೆದರೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನವರ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕಾಗಿದೆʼ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಜಿಲ್ಲೆಯಾದ್ಯಂತ ಸಂಭ್ರಮದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸವ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣ ಕಮಕನೂರು, ಶಶಿಲ್ ನಮೋಶಿ ಸೇರಿದಂತೆ ಅಧಿಕಾರಿಗಳು ಹಾಗೂ ಮುಂತಾದವರಿದ್ದರು.