ಕಲಬುರಗಿ | ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿ : ಸಚಿವ ಪ್ರಿಯಾಂಕ್‌ ಖರ್ಗೆ

Date:

ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಸೂಚಿಸಿದರು.

- Advertisement -

ʼನೆರೆ ಹಾವಳಿಯಿಂದ ಯಾವುದೇ ರೀತಿಯ ಜನ, ಜಾನುವಾರು ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯಿಂದ ಮನೆ ಕುಸಿದು ಬಿದ್ದಲ್ಲಿ, ಭಾಗಶಃ ಹಾನಿಯಾದಲ್ಲಿ ಎನ್‌ಡಿಆರ್‌ಎಫ್‌/ ಎಸ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ತಕ್ಷಣವೇ ಪರಿಹಾರ ಒದಗಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ʼನೋಡಲ್ ಅಧಿಕಾರಿಗಳು ನದಿ ದಂಡೆ ಪ್ರದೇಶದಲ್ಲಿ ನೆರೆ ಹಾವಳಿಗೆ ತುತ್ತಾಗುವ ಸಂಭಾವ್ಯ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರ ಎಲ್ಲ ರೀತಿಯ ಸುರಕ್ಷತೆಯ ಬಗ್ಗೆ ಖಾತ್ರಿಪಡಿಸಬೇಕು. ನದಿ, ಜಲಾಶಯ, ಕೆರೆ, ಕಟ್ಟೆಯತ್ತ ಬಟ್ಟೆ ಒಗೆಯಲು, ದನ-ಕರು ಮೇಯಿಸಲು ಹೋಗದಂತೆ ಜನತೆಗೆ ತಿಳಿವಳಿಕೆ ಮೂಡಿಸಬೇಕು. ವಿಶೇಷವಾಗಿ ಯುವ ಸಮುದಾಯ ಇಂತಹ ಸಂದರ್ಭದಲ್ಲಿ ಸೆಲ್ಫಿ, ನೀರಿನಲ್ಲಿ ಈಜುವಂತಹ ದುಸ್ಸಾಹಸಗಳಿಗೆ ಮುಂದಾಗುವುದನ್ನು ಪೊಲೀಸ್ ಇಲಾಖೆ ತಡೆಯಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ʼಗಾಣಗಾಪೂರ ಮತ್ತು ಘತ್ತರಗಾ ಮುಂತಾದ ಧಾರ್ಮಿಕ ಸ್ಥಳಗಳಿಗೆ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಶೇಷ ಗಮನ ಹರಿಸಬೇಕು. ಸತತ ಮಳೆಯಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಕಾಟ ಹೆಚ್ಚಲಿದ್ದು, ಆರೋಗ್ಯ ಇಲಾಖೆ ಇದರ ನಿಯಂತ್ರಣಕ್ಕೆ ಮುಂದಾಗಬೇಕು. ನೀರಿನ ಲ್ಯಾಬ್ ಟೆಸ್ಟ್ ಹೆಚ್ಚಿಸಿ ಶುದ್ಧ ನೀರಿನ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಬೇಕು. ಬೆಳೆ ಹಾನಿ ಕುರಿತು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಬೇಕುʼ ಎಂದು ನಿರ್ದೇಶಿಸಿದರು.

ಸಭೆಯಲ್ಲಿ ನೀಡಲಾದ ಈ ಸಲಹೆ ಸೂಚನೆಗಳನ್ನು ಅಧಿಕಾರಿ ವರ್ಗವು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು. ಜನಜೀವನವನ್ನು ರಕ್ಷಿಸುವುದನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹಾಗೂ ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...