ಕಲಬುರಗಿ | ಯುವ ಜನಾಂಗಕ್ಕೆ ಭಗತ್ ಸಿಂಗ್ ವಿಚಾರಧಾರೆ ಆದರ್ಶ : ಲಕ್ಷ್ಮಣ ಮಂಡಲಗೇರಾ

Date:

Advertisements

ಕ್ರಾಂತಿಕಾರಿ ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ವಿಚಾರಧಾರೆ ಪ್ರಸ್ತುತ ಸಮಾಜಕ್ಕೆ ಆದರ್ಶವಾಗಿವೆ ಎಂದು ದೇಶಪ್ರೇಮಿ ಯುವಾಂದೋಲನ ಸಂಘಟನೆ ವಿಭಾಗೀಯ ಸಂಚಾಲಕ ಲಕ್ಷ್ಮಣ್ ಮಂಡಲಗೇರಾ ತಿಳಿಸಿದರು.

ಕಲಬುರಗಿ ನಗರದ ಜಿಡಿಎ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ದೇಶಪ್ರೇಮಿ ಯುವಾಂದೋಲನ ಸಂಘಟನೆ ಆಯೋಜಿಸಿದ್ದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಹುತಾತ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ ಮಾತನಾಡಿ, ʼದೇಶಾದ್ಯಂತ ಭಗತ್‌ ಸಿಂಗ್‌, ರಾಜ್‌ಗುರು, ಸುಖದೇವ್ ಅವರ ಹುತಾತ್ಮ ದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಈ ಮೂವರು ಹೋರಾಟಗಾರರು ದೇಶದ ಸ್ವಾತಂತ್ರ್ಯ ಹಾಗೂ ಭವಿಷ್ಯದ ಪರಿಕಲ್ಪನೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದರುʼ ಎಂದು ಹೇಳಿದರು.

Advertisements
WhatsApp Image 2025 03 24 at 6.52.53 PM

ʼದೇಶದಲ್ಲಿ ಸಾಮಾಜಿಕ, ಆರ್ಥಿಕ ಅಸಮಾನತೆ ತಾಂಡವಾಡುತ್ತಿದೆ. ಹೀಗಾಗಿ ಬಡವರಿಗೆ ಸಮರ್ಪಕ ಶಿಕ್ಷಣ, ಉದ್ಯೋಗ ಸಿಗದೆ ಯುವಜನರು ಜೀವನ ನಡೆಸಲು ಹೋರಾಟ ನಡೆಸಬೇಕಾಗಿದೆ. ಇಂತಹ ಮಹಾತ್ಮರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಯುವ ಜನತೆ ಜಾತಿ, ಮತ ಬೇಧವಿಲ್ಲದೆ ದೇಶದ ಸುಸ್ಥಿರ ಭವಿಷ್ಯದ ಕಡೆಗೆ ಗಮನ ಹರಿಸಬೇಕುʼ ಎಂದರು.

ದೇಶಪ್ರೇಮಿ ಯುವಾಂದೋಲನ ಜಿಲ್ಲಾ ಸಂಚಾಲಕ ಮೈಲಾರಿ ದೊಡಮನಿ, ವಸತಿ ನಿಲಯದ ಮೇಲ್ವಿಚಾರಕ ನೀಲಕಂಟ ಸಿಂಗೆ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಬೀದರ್‌ನಲ್ಲಿ ಭಗತ್‌ ಸಿಂಗ್ ಹುತಾತ್ಮ ದಿನಾಚರಣೆ :

ದೇಶಕ್ಕಾಗಿ ಹುತಾತ್ಮರಾದ ಕ್ರಾಂತಿಕಾರಿಗಳಾಗಿದ್ದ ಭಗತ್‌ ಸಿಂಗ್‌, ರಾಜಗುರು ಹಾಗೂ ಸುಖದೇವ್‌ ಅವರ 94ನೇ ಹುತಾತ್ಮ ದಿನ ಬೀದರ್ ನಗರದ ಭಗತ್‌ ಸಿಂಗ್‌ ವೃತ್ತದಲ್ಲಿ ಭಾನುವಾರ ಬೆಳಿಗ್ಗೆ ಆಚರಿಸಲಾಯಿತು.

WhatsApp Image 2025 03 24 at 6.58.52 PM

ಕರ್ನಾಟಕ ರಕ್ಷಣಾ ವೇದಿಕೆ, ಯುವ ಜನಾಂದೋಲನ ಸಂಘಟನೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇಶಪ್ರೇಮಿ ಯುವಾಂದೋಲನ ಸಂಘಟನೆಯ ಪ್ರಮುಖರಾದ ಓಂಪ್ರಕಾಶ ರೊಟ್ಟೆ, ಮುಹಮ್ಮದ್‌ ನಿಜಾಮುದ್ದೀನ್‌ ಹಾಗೂ ಕರವೇ ಜಿಲ್ಲಾಧ್ಯಕ್ಷ ಅರುಣ ಕೋಡಗೆ, ಜಿಲ್ಲಾ ಉಪಾಧ್ಯಕ್ಷ ಅಮರ್‌ ಗಾದಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಮಡಕೆ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರಭು ಮದರಗಿಕರ್, ಶ್ರೀಮಂತ ಸಪಾಟೆ, ಸುನೀಲ, ರಾಜು ಗಂದಗೆ, ರಾಜು ಗುಬ್ಬೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X