ಕಲಬುರಗಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಭಟನೆ

Date:

ವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ವತಿಯಿಂದ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಚಿಂಚೋಳಿ ತಾಲೂಕಿನ ಚಂದಾಪೂರ ಪಟ್ಟಣದ ಕನಕ ವೃತ್ತದಿಂದ ಮೆಟ್ರಿಕ್ ಅಗ್ರೋ ಪವರ್ ಲಿಮಿಟೆಡ್ ಪೋಲಕಪಳ್ಳಿ ಕಾರ್ಖಾನೆವರೆಗೆ ಬೃಹತ್ ಪ್ರತಿಭಟನೆ ನಡೆಸುವುದರ ಮೂಲಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮನವಿ ಪತ್ರ ಸಲ್ಲಿಸಿದ ಬಳಿಕ ಮುಖಂಡ ಮಾರುತಿ ಗಂಜಗಿರಿ ಮಾತನಾಡಿ, ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಮೆಟ್ರಿಕ್ ಆಗ್ರೋ ಪವರ್ ಲಿಮಿಟೆಡನಲ್ಲಿ ಫೋಕಿಂಗ್ ಬೈಲರಗಳಿಗೆ ಸಂಬಂಧಪಟ್ಟ ಎಪಿಎಚ್ ಮತ್ತು ಈಎಸ್‌ಪಿಗಳು ಕೆಟ್ಟು ಹೋಗಿದೆ. ಇದರಿಂದ ಕಪ್ಪು ಹೊಗೆ ಹೋರ ಹೋಗದೆ ಕಂಪನಿ ಒಳಭಾಗದಲ್ಲಿಯೇ ಹೋರಸೂಸುತ್ತಿರುವುದರಿಂದ ಕೆಲಸ ಮಾಡುವ ಕಾರ್ಮಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಅಲ್ಲದೆ ಸಾರ್ವಜನಿಕರಿಗೆ ಮತ್ತು ಕಂಪನಿ ಮುಂಭಾಗದಲ್ಲಿರುವ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ಕೊಡಲೆ ಕಂಪನಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾರ್ಖಾನೆ ಅಧಿನಿಯಮ ಉಲ್ಲಂಘನೆ ಮಾಡಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಮತ್ತು ಸೇಪ್ಟಿ ಸಾಮಾಗ್ರಿಗಳ ನೀಡದೆ ದುಡಿಸಿಕೊಳ್ಳುತ್ತಿದೆ. ಕಾರ್ಖಾನೆ ಅಧಿನಿಯಮದ ಪ್ರಕಾರ ನೂರು ಜನ ಕಾರ್ಮಿಕರು ಕೆಲಸ ಮಾಡುವ ಕಂಪನಿಗಳಲ್ಲಿ ಕಾರ್ಮಿಕರಿಗೆ ವಿಶ್ರಾಂತಿ ಕೋಣೆ ಮತ್ತು ಶೌಚಾಲಯ ಇರಬೇಕು. ಈ ಪವರ್ ಪ್ಯಾಂಟ್ನಲ್ಲಿ ಇದಾವ ಸೌಕರ್ಯವಿಲ್ಲ. ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದರು ಕೂಡ ಈ ಕಂಪನಿಯವರು ಕನಿಷ್ಠ ವೇತನ ನೀಡದೆ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ಧಿ ಓದಿದ್ದೀರಾ ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಗೋಪಾಲ ಗಾರಂಪಳ್ಳಿ, ಮೋಹನ ಐನಾಪುರ, ರಾಜಕುಮಾರ್ ಚಿಮ್ಮಾಯಿದ್ಲಾಯಿ, ಮೌನೇಶ್ ಗಾರಂಪಳ್ಳಿ, ಕಂಪನಿಯಲ್ಲಿ ಕೆಲಸ ಮಾಡುವ ಶಿವರಾಜ ಚಿಮ್ಮಾಯಿದ್ಲಾಯಿ , ಬಸವಸಾಗರ, ಮಹೇಶಕುಮಾರ, ಬಸವರಾಜ, ಉಮೇಶ್, ಶ್ರೀಮಂತ, ಪವನ, ಸಾಗರ, ದೀಲಿಪ, ಪ್ರಶಾಂತ, ಮಲ್ಲಿಕಾರ್ಜುನ, ಈಶಪ್ಪಾ, ಮಾಹಂತೇಶ, ಮಧುಸೂದನ, ವೀಠಲ್, ಸಂಜುಕುಮಾರ, ಈರಯ್ಯ, ನಾಗರಾಜ, ಅಲ್ತಾಫ್ ಖಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...