ಕಲಬುರಗಿ | ಶ್ರೀನಿವಾಸ ಬಾಳುವಾಲೆ ಅಮಾನತು ಆದೇಶ ಹಿಂಪಡೆಯುವಂತೆ ಭೀಮ್ ಆರ್ಮಿ ಆಗ್ರಹ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲಬುರಗಿ ನಗರ ವ್ಯಾಪ್ತಿಯ ಮಾಜಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಶ್ರೀನಿವಾಸ ಬಾಳುವಾಲೆ ಅವರ ಅಮಾನತು ಕ್ರಮವನ್ನು ಹಿಂಪಡೆದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಭೀಮ್ ಆರ್ಮಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ ಮಾತನಾಡಿ, ‘ಅಂಗನವಾಡಿ ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸ ಬಾಳುವಾಲೆ ಅವರನ್ನು ಉದ್ದೇಶಪೂರ್ವಕವಾಗಿ ಬಲಿಪಶು ಮಾಡಲಾಗಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

‘2024-25ನೇ ಸಾಲಿನ ಅಂಗನವಾಡಿ ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಗಳ ಬಳಕೆ ಕುರಿತು ಶ್ರೀನಿವಾಸ ಬಾಳುವಾಲೆ ಅವರೇ ಸಂಬಂಧಿಸಿದ ಪ್ರಾಧಿಕಾರಗಳಿಗೆ ಪತ್ರ ಬರೆದು ಪರಿಶೀಲನೆ ನಡೆಸುವಂತೆ ಕೋರಿದ್ದರು. ನಂತರ ನಾಲ್ವರು ಅಭ್ಯರ್ಥಿಗಳು ನಕಲಿ ಅಂಕಪಟ್ಟಿ ಸಲ್ಲಿಸಿರುವುದು ದೃಢಪಟ್ಟಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳದೆ ಬಾಳುವಾಲೆ ಅವರನ್ನೇ ಗುರಿಯಾಗಿಸಲಾಗಿದೆ’ ಎಂದು ದೂರಿದರು.

‘ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲು ಕೇವಲ ನಾಲ್ಕು ದಿನಗಳ ಮೊದಲು ಅಧಿಕಾರ ವಹಿಸಿಕೊಂಡಿದ್ದ ಬಾಳುವಾಲೆ ಅವರು ಅಂಕಪಟ್ಟಿಗಳನ್ನು ತಿದ್ದುಪಡಿ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಯಾವುದೇ ತಾರ್ಕಿಕತೆ ಇಲ್ಲ. ಸಹಜ ನ್ಯಾಯದ ತತ್ವಗಳನ್ನು ಪಾಲಿಸದೆ ಇಲಾಖೆಯು ಅವರನ್ನು ಅಮಾನತುಗೊಳಿಸಿದೆ’ ಎಂದು ಅವರು ಆರೋಪಿಸಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್, ಮಾಜಿ ಸಿಡಿಪಿಒಗಳಾದ ಭೀಮರಾಯ ಕಣ್ಣೂರ ಹಾಗೂ ಶಿವಶರಣಪ್ಪ ಬುಶೆಟ್ಟಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ನೇಮಕಾತಿ ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಿ ನೈಜ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ದಲಿತ ಸಮುದಾಯಕ್ಕೆ ಸೇರಿದ ಹಾಗೂ ದೃಷ್ಟಿ ವಿಕಲಚೇತನರಾಗಿರುವ ಶ್ರೀನಿವಾಸ ಬಾಳುವಾಲೆ ಅವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಈ ಅನ್ಯಾಯ ಮುಂದುವರಿದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಭೀಮ್ ಆರ್ಮಿ ಎಚ್ಚರಿಕೆ ನೀಡಿತು.

ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಧ್ಯಪ್ರವೇಶಿಸಿ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕಡೇಚೂರ್ ಆದರ್ಶ ಬದುಕಿನ ಪ್ರತಿಬಿಂಬ ‘ಅಯ್ಯನ ಕಥೆಗಳು’: ಡಾ. ಸತೀಶ್ ಹೊಸಮನಿ

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಸುನಿಲ್ ಮಾನ್ನಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಂಗರಗಿ, ಜಿಲ್ಲಾ ಕಾರ್ಯದರ್ಶಿ ಸುಧೀರ ಹೊನ್ನಳ್ಳಿ, ಭೀಮ್ ಆರ್ಮಿ ಮುಖಂಡ ರಾಜಕುಮಾರ ಮೋಘಾ, ಜನಪರ ವೇದಿಕೆ ಉಪಾಧ್ಯಕ್ಷ ಸಿದ್ದಾರ್ಥ ಎಂ.ಕೆ., ಜಿಲ್ಲಾ ಉಪಾಧ್ಯಕ್ಷ ರಾಹುಲ್ ಶ್ರೀಮಂತಕರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...