ಕಲಬುರಗಿ | ಭೂಮಾನಂದ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಬಿಎಸ್‌ಪಿ ಆಗ್ರಹ

Date:

ರಾಯಚೂರು ಜಿಲ್ಲಾ ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿ ಭೂಮಾನಂದ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಬಿಎಸ್‌ಪಿ ‌ ಸೇಡಂ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಅಧ್ಯಕ್ಷ ರೇವಣಸಿದ್ದಪ್ಪ ಎಸ್. ಶಿಂಧೆ ಮಾತನಾಡಿ, ‘ಭೂಮಾನಂದ ಅವರನ್ನು ದುಷ್ಕರ್ಮಿಗಳು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ಪ್ರಕರಣದಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

‘ಮೃತರ ಕುಟುಂಬದ ಸದಸ್ಯರಿಗೆ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸಬೇಕು. ಸರ್ಕಾರದಿಂದ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮೃತ ಭೂಮಾನಂದ ಅವರ ಪತ್ನಿ ಗೌರಮ್ಮ ಅವರಿಗೆ ಸರ್ಕಾರಿ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿದರು.

ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಂಡು ಅಗತ್ಯ ನೆರವು ನೀಡಬೇಕು ಎಂದು ಬಿಎಸ್ಪಿ ಸೇಡಂ ವಿಧಾನಸಭಾ ಕ್ಷೇತ್ರದ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಜೈಲ್ ಭರೋ ಚಳವಳಿ: ರೈತ, ಕಾರ್ಮಿಕರು ಸೇರಿ ಹಲವರ ಬಂಧನ

ಈ ಸಂದರ್ಭದಲ್ಲಿ ಸಿದ್ದು ದೊರೆ, ಸಿದ್ಧಾರ್ಥ ಚಿಂತಪಲ್ಲಿ, ಮಹೇಶ್, ಲೋಹಿತ, ಶಿವು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...

ವಿಜಯಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಕರೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...