ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನಗಳನ್ನು ನೀಡಿದ ಮೂವರು ಪೋಷಕರಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ₹75 ಸಾವಿರ ದಂಡ ವಿಧಿಸಿದೆ.
ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ಪೋಷಕರಿಗೆ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ತಲಾ ₹25 ಸಾವಿರ ದಂಡವನ್ನು ವಿಧಿಸಿದೆ.
ಪೋಷಕರು ಅಪ್ರಾಪ್ತರಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬಾರದು ಎಂದು ಜಿಲ್ಲಾ ಪೊಲೀಸ್ ಸೂಚಿಸಿದೆ.