ಬಿಜೆಪಿದಲ್ಲಿ ಹಿರಿಯ ಮುಖಂಡರಿಗೆ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲವೆಂದು ಕಲಬುರಗಿ ಜಿಲ್ಲಾ ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ ಅವರು ಸಂಸದ ಉಮೇಶ್ ಜಾಧವ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ರದ್ದೆವಾಡಗಿಯವರ ಎದುರು ಅಸಮಾಧಾನ ವ್ಯಕ್ತಪಡಿಸಿದರು.
ಕಲಬುರಗಿ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಸಂಸದ ಉಮೇಶ ಜಾಧವ್ ಅವರು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಬಿಜೆಪಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಬಿಜೆಪಿಯಲ್ಲಿ ಶಿಷ್ಟಾಚಾರದ ಪ್ರಕಾರ ಹಿರಿಯ ಮುಖಂಡರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಅಲ್ಲದೆ ಕಾರ್ಯಕರ್ತರಿಗೂ ಯಾವುದೇ ಬೆಲೆ ಇಲ್ಲದಂತಾಗಿದೆ. ಕಾರ್ಯಕರ್ತರು ಮತ್ತು ಮುಖಂಡರನ್ನು ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನೋಡುತ್ತಿದ್ದಾರೆ. ಚುನಾವಣೆಗೆಂದೇ ಬಂದ ಕೆಲ ಮುಖಂಡರಿಗೆ ಸ್ಥಾನ ಮಾನ ನೀಡುತ್ತಿರುವುದು ಸರಿಯಲ್ಲ. ಆ ಮುಖಂಡರಿಂದಲೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್ ಅಳವಡಿಕೆ
“ಚುನಾವಣೆಯಲ್ಲಿ ಗೆಲ್ಲಲು ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಸ್ಥಳೀಯ ಮುಖಂಡರ ಕಾರ್ಯ ಮುಖ್ಯವಾಗಿರುತ್ತದೆ” ಎಂದು ಆಕ್ರೋಶ ಹೊರ ಹಾಕುತ್ತಿದ್ದಂತೆ ಇನ್ನುಳಿದ ಕೆಲ ಕಾರ್ಯಕರ್ತರೂ ಕೂಡ ದನಿಗೂಡಿಸಿದ್ದಾರೆ.
ಮಾಹಿತಿ :ಅನಂತ್