ಕಲಬುರಗಿ | ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ಬೇರೆಡೆ ಬಳಕೆಯಾದರೆ ಬಿಜೆಪಿ ದಾಖಲೆ ನೀಡಲಿ : ಪ್ರಿಯಾಂಕ್‌ ಖರ್ಗೆ

Date:

ನಮ್ಮ ಸರ್ಕಾರ ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ನಿಯಮ ಬದ್ಧವಾಗಿಯೇ ಬಳಕೆ ಮಾಡುತ್ತಿದೆ. ಬೇರೆಡೆ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ. ಆಗ ಅದರ ಬಗ್ಗೆ ಕ್ರಮ‌ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

- Advertisement -

ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಮಾಜಿ ಪ್ರಧಾನಿ ಇಂದಿರಾಗಾಂಧಿ ಮಾಡಿದ ಕೆಲಸದಲ್ಲಿ ಅರ್ಧದಷ್ಟಾದರೂ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ. ಇಂದಿರಾ ಗಾಂಧಿ ಬ್ಯಾಂಕ್‌ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನ ಇಬ್ಬಾಗ ಮಾಡಿದ್ದು ಸೇರಿದಂತೆ ಹಲವಾರು‌‌ ಕ್ರಾಂತಿಕಾರಿ ಬದಲಾವಣೆ ಮಾಡಿದ್ದಾರೆ. ಇಂದಿರಾ ಗಾಂಧಿ‌ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ, ಇವರೇನು ಮಾಡಿದ್ದಾರೆʼ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕೇಂದ್ರಿಯ ವಿವಿಗಳು ಆರ್‌ಎಸ್‌ಎಸ್ ಶಾಖೆಗಳಾಗಿವೆ:

ʼಕೇಂದ್ರಿಯ ವಿಶ್ವವಿದ್ಯಾಲಯಗಳು ಆರೆಸ್ಸೆಸ್‌ ಶಾಖೆಗಳಾಂತಾಗಿವೆ ಎಂದು ಆರೋಪಿಸಿದ ಖರ್ಗೆ, ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ಲಾಿಖೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲು ನಮಗೆ ಅನುಮತಿ ನಿರಾಕರಿಸಲಾಗಿದೆ. ಮಲ್ಲಿಕಾರ್ಜು ಖರ್ಗೆ ಅವರು ಈ ಭಾಗಕ್ಕೆ ಅನುಕೂಲ ಆಗಲಿ ಎಂದು ಜಿಲ್ಲೆಗೆ ಕೇಂದ್ರೀಯ ವಿವಿ ತಂದರು. ಆದರೆ, ಅದು ಆರ್‌ಎಸ್‌ಎಸ್ ಶಾಖೆ ಮಾಡಲು ಅನುಕೂಲ ಮಾಡಿಕೊಟ್ಟಂತಾಗಿದೆʼ ಎಂದು ಟೀಕಿಸಿದರು.

ಮೋದಿ ಕೊಡುಗೆ ನೀಡಿ ಮನ್ ಕಿ ಬಾತ್ ಮಾತಾಡಲಿ:

ʼಪ್ರಧಾನಿ ಮೋದಿ ಅವರ ʼಮನ್ ಕಿ ಬಾತ್‌’ ಕೇಳಿ ಕೇಳಿ ಸಾಕಾಗಿದೆ. ಏನಾದರೂ ಕೊಡುಗೆ ಕೊಟ್ಟು ಮೋದಿ ಮಾತನಾಡಲಿ. ಈ ಹಿಂದೆ ಕಲಬುರಗಿ ರೊಟ್ಟಿ ಬಗ್ಗೆ ಮಾತನಾಡಿದ್ದಾರೆ. ಮುಂದಿನ ದಿನ ಮತ್ತೊಂದು‌ ವಿಷಯದ‌ ಬಗ್ಗೆ ಮಾತನಾಡುತ್ತಾರೆ. ಕೊಡುಗೆ ನೀಡಿ ಆಮೇಲೆ ಮಾತನಾಡಲಿʼ ಎಂದು ಕುಟುಕಿದರು.

ಬಾಡಿಗೆ ಭಾಷಣಕಾರರ‌ ಬಗ್ಗೆ ಏನು ಹೇಳಲಿ?:

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಯೋಗ್ಯ ಪದ ಬಳಸಿದ್ದಕ್ಕೆ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದಾಖಲಾದ ಎಫ್‌ಐಆರ್‌ಅನ್ನು ಸುಪ್ರೀಂ ಕೊರ್ಟ್ ರದ್ದು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಡಿಗೆ ಭಾಷಣಕಾರರ ಬಗ್ಗೆಯಾಗಲಿ, ಅವರ ಬಾಸ್ ಗಳ ಬಗ್ಗೆಯಾಗಲಿ ನಾನೇನು ಉತ್ತರಿಸಲಿ. ನಾನು ಯಾವುದಾದರೂ ಎಫ್‌ಐಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ, ಅದಕ್ಕೆ‌ ನಾನೇನು ಹೇಳಲಿ? ಎಂದು ಪ್ರತಿಕ್ರಿಯಿಸಿದರು.

ಯೂರಿಯಾ ಸರಬರಾಜಿಗೆ ಕೇಂದ್ರಕ್ಕೆ ಮನವಿ :

ʼಯೂರಿಯಾ ಕೊರತೆ ಅಷ್ಟೊಂದು ಕಾಣಿಸುತ್ತಿಲ್ಲ. ಕಳೆದ ಒಂದೂವರೆ ತಿಂಗಳ ಹಿಂದೆ ಕೇಂದ್ರ ಕೃಷಿ‌ ಸಚಿವರನ್ನು ಭೇಟಿ ಮಾಡಿ‌ದ ಕೃಷಿ‌ ಸಚಿವ ಚೆಲುವರಾಯಸ್ವಾಮಿ‌ ಯೂರಿಯಾ ಗೊಬ್ಬರ ಸರಬರಾಜಿಗೆ ಆದ್ಯತೆ ನೀಡುವಂತೆ ಮನವಿ‌ ಸಲ್ಲಿಸಿದ್ದರು. ಈ ಸಲ ನಮಗೆ ಅಗತ್ಯವಿರುವ ಗೊಬ್ಬರ ಸರಬರಾಜು ಮಾಡಿಲ್ಲ. ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್‌ ಅನ್ನು‌ ಬೇಡಿಕೆಯಲ್ಲಿ ಕಡಿತಗೊಳಿಸಿದ ಕೇಂದ್ರ ಸರಕಾರ ಉಳಿದ ರಸಗೊಬ್ಬರ ಸರಬರಾಜು‌ ಮಾಡಿದೆ. ಈ ಹಿಂದೆ ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್ ನ್ನು‌ ಪರಿಗಣಿಸುತ್ತಿರಲಿಲ್ಲʼ ಎಂದರು.

ಇದನ್ನೂ ಓದಿ : ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ʼಕಲಬುರಗಿ ಜಿಲ್ಲೆಯಲ್ಲಿ ಈ ಸಲ ಶೇ100 ರಷ್ಟು ಬಿತ್ತನೆಯಾಗಿದೆ. 500 ಟನ್ ಗೊಬ್ಬರ ಬೇಡಿಕೆ ಇದ್ದು, 200 ಟನ್ ಗೊಬ್ಬರವನ್ನು ಬಾಗಲಕೋಟೆಯಿಂದ ತರಿಸಲಾಗುತ್ತಿದೆ. ಉಳಿದ 300 ಟನ್ ರಸಗೊಬ್ಬರವನ್ನು ಆದಷ್ಟು ಬೇಗ ತರಿಸಲಾಗುವುದು. ರಸಗೊಬ್ಬರ ವಿಚಾರದಲ್ಲಿ ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಗರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿ ರಾಜ್ಯಕ್ಕೆ ಗೊಬ್ಬರ ತರಿಸಿಕೊಡಲಿʼ ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...