ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

Date:

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ ಮಹಿಳೆ ಹಾಗೂ ಯುವಕನ ಮೃತದೇಹಗಳು ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಸಾವಿನ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

ಮೃತರನ್ನು ಚಿತ್ತಾಪುರ ಪಟ್ಟಣದ ಬಸವ ನಗರದ ಶರಣಮ್ಮ ಭೀಮನಳ್ಳಿ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ ಗ್ರಾಮದ ಬಸವರಾಜ ಮಟ್ಟೇರ್ (21) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇಬ್ಬರ ನಡುವೆ ಪ್ರೇಮ ಸಂಬಂಧವಿತ್ತು ಎನ್ನಲಾಗುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ದೃಢೀಕರಣವಾಗಿಲ್ಲ. ಸಾವಿಗೆ ಪ್ರೇಮ ಸಂಬಂಧವೇ ಕಾರಣವೇ ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಇಬ್ಬರ ಮೃತದೇಹಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ DySP ಶಂಕರಗೌಡ ಪಾಟೀಲ್, ಚಿತ್ತಾಪುರ PSI ಮಂಜುನಾಥ ರೆಡ್ಡಿ ಹಾಗೂ ವಾಡಿ PSI ತಿರುಮಲೇಶ ಕುಂಬಾರ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮೃತದೇಹಗಳನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಕುರಿತು ವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಸಂಭ್ರಮದ ಹಿಂದಿನ ಶ್ರಮ: ಗಣಪನ ಮೂರ್ತಿ ತಯಾರಕರ ಬದುಕು-ಬವಣೆ

ಇಬ್ಬರ ಸಾವಿನ ಹಿಂದಿನ ಕಾರಣ, ಘಟನೆ ನಡೆದ ಸಂದರ್ಭ ಹಾಗೂ ಇತರ ಸಾಧ್ಯತೆಗಳ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಲಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...