ಕಲಬುರಗಿ | ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಆರೋಪ, ಐವರ ವಿರುದ್ಧ ದೂರು

Date:

ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದು, ಈ ಸಂಬಂಧ ಓರ್ವ ಮಹಿಳೆ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಮೃತನನ್ನು ಆಕಾಶ್ ಅಮೃತ ಮಾಂಗ್ (21) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಗ್ರಾಮದ ಯುವತಿಯೊಬ್ಬಳೊಂದಿಗೆ ಆಕಾಶ್‌ಗೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದ್ದು, ಬಳಿಕ ಆಕೆಗೆ ಬೇರೊಬ್ಬನೊಂದಿಗೆ ವಿವಾಹವಾಗಿತ್ತು. ಆದಾಗ್ಯೂ, ಇಬ್ಬರ ನಡುವೆ ಸಂಪರ್ಕ ಮುಂದುವರಿದಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಈ ವಿಚಾರ ಈ ಹಿಂದೆ ಪೊಲೀಸ್ ಠಾಣೆಯಲ್ಲಿಯೂ ಚರ್ಚೆಗೆ ಕಾರಣವಾಗಿತ್ತು ಎಂದು ತಿಳಿದುಬಂದಿದೆ.

ಸೋಮವಾರ ಗ್ರಾಮದ ಹೊರವಲಯದಲ್ಲಿರುವ ಹುಣಸಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆಕಾಶ್‌ನ ಶವ ಪತ್ತೆಯಾಗಿದೆ. ಆದರೆ, ಯುವಕನ ಸಾವಿನ ಹಿಂದೆ ಸಂಚು ಇದೆ ಎಂದು ಆರೋಪಿಸಿರುವ ಕುಟುಂಬಸ್ಥರು, ಯುವತಿಯ ಸಂಬಂಧಿಕರೇ ಕೊಲೆ ಮಾಡಿ ಆತ್ಮಹತ್ಯೆಯಂತೆ ಚಿತ್ರಿಸಲು ಯತ್ನಿಸಿದ್ದಾರೆ ಎಂದು ದೂರಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ನಿಂಬರ್ಗಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮೃತನ ತಂದೆ ಅಮೃತ ಮಾಂಗ್ ನೀಡಿದ ದೂರಿನ ಮೇರೆಗೆ ಓರ್ವ ಮಹಿಳೆ ಸೇರಿದಂತೆ ಐವರ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿದ ಹೊರಗುತ್ತಿಗೆ ನೌಕರರು; ಮರುನೇಮಕಕ್ಕೆ ವಾರದ ಗಡುವು ನೀಡಿದ ವಿವಿ ಆಡಳಿತ

‘ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ...

ಉಡುಪಿ ಜಿಲ್ಲೆಯಲ್ಲಿ ಜಲಕ್ಷಾಮದ ಆತಂಕ: 123 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ

ಎಲ್‌ ನಿನೊ ಪ್ರಭಾವ, ಮಳೆಯ ಕೊರತೆ ಹಾಗೂ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ...

ಶೃಂಗೇರಿ  | ಎಂದಿನಂತೆ ವಾರದ ಸಂತೆ ನಡೆಸಲಾಗುತ್ತದೆ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶಾರದ ನಗರದಲ್ಲಿ ವಾರದ ಸಂತೆ ಮಾಡಲು...

ಸೌಹಾರ್ದತೆ, ಒಗ್ಗಟ್ಟು ಬೆಳೆಸುವಲ್ಲಿ ಸಮುದಾಯ ಭವನಗಳ ಪಾತ್ರ ಮಹತ್ವದ್ದು: ವಂ|ಸ್ಟೀಫನ್ ಡಿಸೋಜಾ

ಸಮುದಾಯ ಭವನಗಳು ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ...