ಕಲಬುರಗಿ | ಮೊಹರಂಕ್ಕೆ ತೆರಳಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ: ಕೊಲೆ ಶಂಕೆ ವ್ಯಕ್ತ

Date:

ಸೇಡಂ ತಾಲೂಕಿನ ಅಳೋಳಿ ಗ್ರಾಮದಲ್ಲಿ 9 ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೃತ ಬಾಲಕನನ್ನು ನಿತೀಶ್ ಹುಳಗೋಳ ಎಂದು ಗುರುತಿಸಲಾಗಿದೆ.

- Advertisement -

ಮೊಹರಂ ಹಬ್ಬದ ಪ್ರಯುಕ್ತ ಭಾನುವಾರ ಸಂಜೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದ ನಿತೀಶ್ ರಾತ್ರಿ ಮನೆಗೆ ಮರಳಿರಲಿಲ್ಲ. ಇದರಿಂದ ಕಳವಳಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಇಡೀ ರಾತ್ರಿ ಗ್ರಾಮದ ವಿವಿಧೆಡೆ ಹುಡುಕಾಟ ನಡೆಸಿದ್ದಾರೆ. ಬಾಲಕನ ಸುಳಿವು ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೇಡಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಸೋಮವಾರ ಬೆಳಗಿನ ಜಾವ ಸುಮಾರು 6 ಗಂಟೆ ವೇಳೆಗೆ ಗ್ರಾಮದ ಬಾವಿಯೊಂದರಲ್ಲಿ ಬಾಲಕನ ಮೃತದೇಹ ತೇಲುತ್ತಿರುವುದು ಕಂಡುಬಂದಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬಾಲಕನ ತಂದೆ ರಾಜೇಂದ್ರ ಹುಳಗೋಳ, “ನನ್ನ ಮಗನ ಸಾವು ಸಹಜವಾಗಿಲ್ಲ. ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಬೆಳಿಗ್ಗೆ ಬಾವಿಯಲ್ಲಿ ಮೃತದೇಹ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷಗಳ ಜೈಲು ಶಿಕ್ಷೆ

ಘಟನೆಯ ಹಿನ್ನೆಲೆ ಹಾಗೂ ಸಾವಿನ ನಿಖರ ಕಾರಣ ತಿಳಿದುಬರಬೇಕಿದ್ದು, ಸೇಡಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಬಾಲಕನ ಸಾವಿನ ಸುತ್ತಲಿನ ಅನುಮಾನಗಳು ನಿವಾರಣೆಯಾಗಲು ಮರಣೋತ್ತರ ಪರೀಕ್ಷೆಯ ವರದಿ ನಿರ್ಣಾಯಕವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...