ಕಲಬುರಗಿ | ಅಂಬೇಡ್ಕರ್ ನಿವಾಸ ಯೋಜನೆ ಅನುದಾನಕ್ಕೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Date:

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಫಲಾನುಭವಿಗೆ ಅನುದಾನ ಬಿಡುಗಡೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಸಂತೋಷ ರಾಠೋಡ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

- Advertisement -

ಹನಿಕೆರಾ ಗ್ರಾಮದ ರಾಮನಾಯಕ ತಾಂಡಾದ ನಿವಾಸಿ ಸಿಖಂದರ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು. ದೂರಿನ ಪ್ರಕಾರ, ಸಿಖಂದರ್ ಅವರ ಅಕ್ಕ ಸವಿತಾ ಅವರಿಗೆ ಮಂಜೂರಾಗಿದ್ದ ಮೂರನೇ ಹಾಗೂ ನಾಲ್ಕನೇ ಕಂತಿನ ನಿವಾಸ ಯೋಜನೆ ಅನುದಾನ ಬಿಡುಗಡೆ ಮಾಡಲು ಆರೋಪಿ ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಲಂಚದ ಮೊತ್ತದಲ್ಲಿ ಮೊದಲ ಕಂತಾಗಿ ₹15 ಸಾವಿರವನ್ನು ಫೋನ್‌ಪೇ ಮೂಲಕ ಸ್ವೀಕರಿಸಲು ಒಪ್ಪಿಕೊಂಡಿದ್ದ ಆರೋಪಿ, ಹಣ ವರ್ಗಾವಣೆಯಾಗುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದರು.

ಕಾರ್ಯಾಚರಣೆಯನ್ನು ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್‌ಸ್ಪೆಕ್ಟರ್ ರಾಜಶೇಖರ ಬಡದೇಸಾರ ನೇತೃತ್ವದ ತಂಡ ನಡೆಸಿತು.

ಇದನ್ನು ಓದಿದ್ದೀರಾ? ಕಲಬುರಗಿ | ಮೊಬೈಲ್ ಟಾರ್ಚ್ ಬೆಳಕಲ್ಲೇ ಕೆಕೆಆರ್‌ಟಿಸಿ ಬಸ್ ಸಂಚಾರ: ಚಾಲಕ ಸೇರಿ ಮೂವರು ಅಮಾನತು

ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದು, ಲಂಚದ ಬೇಡಿಕೆ ಹಾಗೂ ಹಣ ವರ್ಗಾವಣೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...