ಕಲಬುರಗಿ | ಮದ್ಯದ ನಶೆಯಲ್ಲಿ ಕ್ರೌರ್ಯ: ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Date:

ಮದ್ಯದ ನಶೆಯಲ್ಲಿ ನಡೆದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

- Advertisement -

ಸುನಿಲ್ ಚಂದ್ರಪ್ಪ ಸುಣಗಾರ (27) ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಅನಿಲ್ ಸುಣಗಾರ (29) ಅವರನ್ನು ನರೋಣಾ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಸಹೋದರರು ಮದ್ಯ ಸೇವಿಸುವ ಚಟ ಹೊಂದಿದ್ದು, ಆಗಾಗ ಪರಸ್ಪರ ಜಗಳವಾಡುತ್ತಿದ್ದರು. ಗುರುವಾರ ಮುಂಜಾನೆ ಕೂಡ ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ವಾಗ್ವಾದ ಆರಂಭವಾಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಈ ವೇಳೆ ಸುನಿಲ್ ನೆಲಕ್ಕೆ ಬಿದ್ದಿದ್ದು, ಕೋಪೋದ್ರಿಕ್ತನಾದ ಅನಿಲ್ ಸಮೀಪದಲ್ಲಿದ್ದ ಕಲ್ಲನ್ನು ಎತ್ತಿ ಅವರ ತಲೆಯ ಮೇಲೆ ಬಲವಾಗಿ ಹಾಕಿದ್ದಾನೆ ಎನ್ನಲಾಗಿದೆ. ಪರಿಣಾಮ ಸುನಿಲ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಘಟನೆ ಬಳಿಕ ಆರೋಪಿಯು ಮೃತದೇಹದ ಸಮೀಪವೇ ಕುಳಿತಿದ್ದನೆಂದು ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ನರೋಣಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...