ಕಲಬುರಗಿ | ಸುಟ್ಟ ದಾಖಲೆಗಳು ಅಮರ್ಜಾ ನದಿಯಲ್ಲಿ ಪತ್ತೆ; ಸಿಐಡಿ ಪರಿಶೀಲನೆ

Date:

ಆಳಂದದ ಶಕಾಪುರ ಸೇತುವೆ ಬಳಿಯ ಅಮರ್ಜಾ ನದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಲೆಹಾಕಿದ್ದಾರೆ.

- Advertisement -

ಆಳಂದ ಕ್ಷೇತ್ರದ ಮತಪಟ್ಟಿ ಕುರಿತು ಕೆಲವು ಮತದಾರರ ಹೆಸರನ್ನು ಅಕ್ರಮವಾಗಿ ತೆಗೆದುಹಾಕಲು ಯತ್ನಿಸಿದ ಪ್ರಕರಣ ಸಂಬಂಧ, ಸುಭಾಷ್ ಗುತ್ತೆದಾರ್ ಅವರ ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಮನೆಯ ಮೇಲೆ ಎಸ್‌ಐಟಿ ತಂಡ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಆಳಂದದ ರೇವಣಸಿದ್ದೇಶ್ವರ ಕಾಲೋನಿಯಲ್ಲಿರುವ ಅವರ ಮನೆ ಎದುರು ಅಪಾರ ಪ್ರಮಾಣದ ದಾಖಲೆಗಳಿಗೆ ಬೆಂಕಿ ಹಚ್ಚಿ ಸುಡಲಾಗಿದೆ. ಖಚಿತ ಮಾಹಿತಿಯ ಮೇರೆಗೆ, ಸಿಐಡಿ ಎಸ್ಪಿ ಶುಭನ್ವಿತಾ ಮತ್ತು ಡಿವೈಎಸ್ಪಿ ಅಸ್ಲಂಪಾಶಾ ಆಳಂದಕ್ಕೆ ಭೇಟಿ ನೀಡಿ ಮನೆ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮತ್ತೊಂದೆಡೆ ಅರೆಬರೆಯಾಗಿ ಸುಟ್ಟ ದಾಖಲೆಗಳನ್ನು ನಂತರ ಗೂಡ್ಸ್ ವಾಹನದಲ್ಲಿ ಶಕಾಪುರ ಸೇತುವೆ ಬಳಿಯ ಅಮರ್ಜಾ ನದಿಗೆ ಸುರಿಸಲಾಗಿದೆ. ಸ್ಥಳಕ್ಕೆ ಸಿಐಡಿ ಇನ್ಸ್‌ಪೆಕ್ಟರ್ ಶರಣಗೌಡ ನೇತೃತ್ವದಲ್ಲಿ ಸಿಬ್ಬಂದಿ ತಂಡ ನದಿಯಲ್ಲಿ ಇಳಿದು ತಡರಾತ್ರಿ ತನಕ ಸುಟ್ಟ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಉಸ್ತುವಾರಿ ಸಚಿವರ ಭರವಸೆ : 7 ದಿನಗಳ ಧರಣಿ ಕೈಬಿಟ್ಟ ರೈತರು

ಸ್ಥಳೀಯ ಅಧಿಕಾರಿಗಳಾಗಿ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಪ್ರಕಾಶ್ ಯಾತನೂರು ಸೇರಿದಂತೆ ಹಲವರು ಕಾರ್ಯ ನಿರ್ವಹಿಸಿದ್ದಾರೆ. ಈ ಪ್ರಕರಣವು ಮತಪಟ್ಟಿ ಸಂಬಂಧ ಅಕ್ರಮ ಪ್ರಯತ್ನಗಳ ಭಾಗವಾಗಿದ್ದು, ಸಿಐಡಿ ತಂಡ ಮುಂದಿನ ತನಿಖೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸುತ್ತಿರುವುದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...