ಕಲಬುರಗಿ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಬೆಳ್ಳಂಬೆಳಗ್ಗೆಯೇ ಐವರ ದುರ್ಮರಣ

Date:

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ನೆಲೋಗಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಾಗಲಕೋಟೆಯ ನವನಗರ ನಿವಾಸಿಗಳು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶನಿವಾರ ಮುಂಜಾನೆ ನವನಗರದ ಒಟ್ಟು 31 ಮಂದಿ ಮಿನಿ ಬಸ್‌ನಲ್ಲಿ ಕಲಬುರಗಿಯ ಖಾಜಾ ಬಂದೇನವಾಜ್‌ ದರ್ಗಾಗೆ ತೆರಳುತ್ತಿದ್ದರು. ನಸುಕಿನ ಹೊತ್ತಿನಲ್ಲಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಐವರು ಮೃತಪಟ್ಟಿದ್ದರೆ, 11 ಮಂದಿಗೆ ಗಂಭೀರ ಗಾಯಗಳಾಗಿವೆ. ಅವರೆಲ್ಲರನ್ನೂ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರೀಶಿಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...