ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

Date:

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ ದೃಷ್ಟಿಯಿಂದ ಅವುಗಳ ಉಪಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಖಣದಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಆಯುರ್ವೇದ ಉಪನ್ಯಾಸಕ ರಮೇಶ ಮಹೇಂದ್ರಕರ್ ಇಜೇರಿ ಅವರು ಶಂಕಪುಷ್ಪ, ಅಶ್ವಗಂಧ, ಕಾಗೆ ಗಿಡ, ಅಲೋವೆರಾ, ನೆಲನೆಲ್ಲಿ, ಕರಿಬೇವು ಸೇರಿದಂತೆ 12 ಬಗೆಯ ಔಷಧೀಯ ಸಸ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಗಿಡಮೂಲಿಕೆಗಳ ಸಾಂಪ್ರದಾಯಿಕ ಬಳಕೆ, ಅವುಗಳ ಆರೋಗ್ಯಕಾರಿ ಗುಣಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಸ್ಯಗಳ ಮಹತ್ವದ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ನಂದಿಕೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನಕುಮಾರ್ ವಳಕೇರಿ ಮಾತನಾಡಿ, ‘ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದರ ಜತೆಗೆ ಪರಿಸರ ಸಂರಕ್ಷಣೆಯತ್ತಲೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು. ವಿದ್ಯಾರ್ಥಿಗಳು ಸಸ್ಯಗಳ ಮಹತ್ವ ಅರಿತು ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಕಲಬುರಗಿ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ್ ವಳಕೇರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಔಷಧೀಯ ಸಸಿಗಳನ್ನು ನೆಡಲಾಯಿತು.

Advertisements
Advertisements

ಇದನ್ನು ಓದಿದ್ದೀರಾ? ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ರವೀಂದ್ರ ವಿಭೂತಿ, ಸುರೇಶ್ ಬಡಿಗೇರ, ಗಣಪತಿ ಬಬಲಾದ, ರಮೇಶ ಮಹೇಂದ್ರಕರ್ ಇಜೇರಿ, ರಾಚಣಗೌಡ ಪಾಟೀಲ್, ಅಬರೀಶ್ ಗುತ್ತೇದಾರ್, ರಾಮ್ಯ ಕುಲಕರ್ಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಗುರುರಾಜ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...