ಕಲಬುರಗಿ | ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಸಾವಿನ ದವಡೆಯಿಂದ ಪಾರಾದ ಒಂದೇ ಕುಟುಂಬದ ನಾಲ್ವರು

Date:

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಭಸ್ಮವಾಗಿರುವ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಸಮೀಪ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಮಯಪ್ರಜ್ಞೆಯಿಂದ ವಾಹನದಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಯಾದಗಿರಿಯಿಂದ ಕಲಬುರಗಿ ಕಡೆಗೆ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಕಾರು ನಾಲವಾರ ಸಮೀಪದ ಪೆಟ್ರೋಲ್ ಬಂಕ್ ಬಳಿ ಬರುತ್ತಿದ್ದಂತೆ ಹಿಂಭಾಗದಿಂದ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಅರಿತ ಪ್ರಯಾಣಿಕರು ಕೂಡಲೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಹೊರಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಅವರು ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಜ್ವಾಲೆಗಳು ಇಡೀ ಕಾರನ್ನು ಆವರಿಸಿಕೊಂಡಿವೆ. ದಟ್ಟ ಹೊಗೆ ಮತ್ತು ಬೆಂಕಿಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಜ್ವಾಲೆಗಳ ತೀವ್ರತೆಯಿಂದಾಗಿ ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದು ವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ತಿರುಮಲೇಶ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಬೆಂಕಿ ಹೊತ್ತಿಕೊಂಡ ಕಾರಿನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ತಾಂತ್ರಿಕ ದೋಷವೇ ಬೆಂಕಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಸುರಕ್ಷಿತವಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಜನಗಣತಿ-2027ಕ್ಕೆ ಸಿದ್ಧತೆ: ಜಿಲ್ಲೆಯ 120 ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯಾದ್ಯಂತ ಜನಗಣತಿ-2027ರ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯ...

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...

ಹಾವೇರಿ | ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು...