ನಗರದ ಜನನಿಬಿಡ ಖರ್ಗೆ ವೃತ್ತದ ಸಮೀಪ ಬುಧವಾರ ರಾತ್ರಿ ಕಾರೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಬುಧವಾರ ನಡೆದಿದೆ.
ಕಾರಿನ ಮುಂಭಾಗದ ಬಾನೆಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ವಾಹನ ಧಗಧಗನೆ ಉರಿಯತೊಡಗಿದ್ದು,
ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಘಟನೆಯಿಂದ ಆತಂಕಗೊಂಡಿದ್ದಾರೆ.
ವಾಹನ ಹೊತ್ತಿ ಉರಿಯುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಸ್ಥಳೀಯರ ಪ್ರಯತ್ನದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕಾರು ಭಾಗಶಃ ಹಾನಿಗೊಳಗಾಗಿದೆ.
ನಗರದ ಪ್ರಮುಖ ವೃತ್ತದಲ್ಲಿ ನಡೆದ ಈ ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಇದನ್ನು ಓದಿದ್ದೀರಾ? ಯಾದಗಿರಿ | ನಾಲ್ಕು ತಿಂಗಳಿಂದ ವೇತನವಿಲ್ಲದೆ ಅತಿಥಿ ಶಿಕ್ಷಕರ ಪರದಾಟ; ಕುಟುಂಬ ನಿರ್ವಹಣೆ ದುಸ್ತರ
ಘಟನೆ ಎಂ.ಬಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.






