ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು 13 ಮಂದಿಯನ್ನು ಬಂಧಿಸಿ, ₹21,390 ನಗದು ಜಪ್ತಿ ಮಾಡಿರುವುದು ತಿಳಿಸಿದು ಬಂದಿದೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಖಣಿ ಸಮೀಪದ ಹನುಮಾನ ದೇವಸ್ಥಾನದ ಬಳಿ ಜೂಜಾಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸೆ.26ರಂದು ಪೊಲೀಸರು ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ 13 ಮಂದಿಯನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಬಳಸುತ್ತಿದ್ದ ₹21,390 ನಗದನ್ನು ಜಪ್ತಿ ಮಾಡಲಾಗಿದೆ. ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಲ್ಲಿ, ಡಿಸಿಪಿಗಳಾದ ಶಾಲೂ ಐಪಿಎಸ್ ಹಾಗೂ ಪ್ರವೀಣ್ ಹೆಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ, ಎಸಿಪಿ ಬಸವೇಶ್ವರ ಹೀರಾ ಅವರ ಮೇಲ್ವಿಚಾರಣೆಯಲ್ಲಿ ಫರಹತಾಬಾದ್ ಠಾಣೆಯ ಪಿಐ ಹುಷೇನ್ ಬಾಷಾ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ಇದನ್ನು ಓದಿದ್ದೀರಾ? ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ
This video cannot be played in your browser. Open the video directly

ಪೊಲೀಸ್ ಸಿಬ್ಬಂದಿಗಳಾದ ಕೇಸುರಾಯ, ಕಲ್ಯಾಣಕುಮಾರ, ತಿರುಪತಿ, ಮಹೇಬೂಬ, ಆನಂದ ಹಾಗೂ ಎಂ.ಆರ್. ಪಟೇಲ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕಾರ್ಯಾಚರಣೆ ಯಶಸ್ವಿಗೊಳಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.





