ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ ಠಾಣೆ ಪೊಲೀಸರು ಬಂಧಿಸಿ, ₹2,040 ನಗದು ಜಪ್ತಿ ಮಾಡಿದ್ದಾರೆ.
ನಗರದ ಎಂ.ಎಸ್.ಕೆ. ಮಿಲ್ ಜಿಲಾನಾಬಾದ್‌ನ ರಿಯಾಸತ್ ಫಂಕ್ಷನ್ ಹಾಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಬುಧವಾರ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಬಂಧಿಸಿ, ಜೂಜಾಟಕ್ಕೆ ಬಳಸುತ್ತಿದ್ದ ₹2,040 ನಗದನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ, ಡಿಸಿಪಿಗಳಾದ ಶಾಲೂ ಐಪಿಎಸ್ ಹಾಗೂ ಪ್ರವೀಣ್ ಹೆಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಉಪವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ್ ಅವರ ಮೇಲ್ವಿಚಾರಣೆಯಲ್ಲಿ ರಾಘವೇಂದ್ರ ನಗರ ಠಾಣೆ ಪಿಐ ವಾಜೀದ್ ಪಟೇಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ಇದನ್ನು ಓದಿದ್ದೀರಾ? ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ
This video cannot be played in your browser. Open the video directly

ಎಎಸ್‌ಐ ಮಲ್ಲಿಕಾರ್ಜುನ ಜಾನೆ ಹಾಗೂ ಸಿಬ್ಬಂದಿ ಮಹೇಬೂಬ, ಸಿದ್ದಣ್ಣಗೌಡ ಮತ್ತು ಆರೇಶ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಶ್ಲಾಘಿಸಿದ್ದಾರೆ.





