ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಅವರಿಂದ ₹8,570 ನಗದು ವಶಪಡಿಸಿಕೊಂಡಿದ್ದಾರೆ.
ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಡಬರಾಬಾದ್ ಆಶ್ರಯ ಕಾಲೋನಿ ಸಮೀಪದ ಹಾಳುಬಿದ್ದ ಮನೆಯ ಬಳಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಅಕ್ಟೋಬರ್ 5ರಂದು ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಬಳಸಲಾಗುತ್ತಿದ್ದ ₹8,570 ನಗದನ್ನು ಜಪ್ತಿ ಮಾಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ ಹಾಗೂ ಉಪ ಪೊಲೀಸ್ ಆಯುಕ್ತರಾದ ಶಾಲೂ ಐಪಿಎಸ್ ಮತ್ತು ಪ್ರವೀಣ್ ಹೆಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಜೇಮ್ಸ್ ಮಿನೇಜಿಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಸಿಸಿಬಿ ಸಿಬ್ಬಂದಿಯಾದ ಮೃತ್ಯುಂಜಯ ಸಿ.ಹೆಚ್.ಸಿ, ಪ್ರದೀಪ ಸಿ.ಹೆಚ್.ಸಿ, ಸುನೀಲಕುಮಾರ ಸಿ.ಹೆಚ್.ಸಿ, ಅಶೋಕ ಕಟಕೆ ಸಿ.ಪಿ.ಸಿ, ನಾಗೇಂದ್ರ ಸಿ.ಪಿ.ಸಿ ಹಾಗೂ ನಾಗರಾಜ ಸಿ.ಪಿ.ಸಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
This video cannot be played in your browser. Open the video directly

ಇದನ್ನು ಓದಿದ್ದೀರಾ? ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ
ಬಂಧಿತ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಚಟುವಟಿಕೆಗಳ ವಿರುದ್ಧ ಪರಿಣಾಮಕಾರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ.





