ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸುಂದರನಗರ ಕಾಲೋನಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಬಂಧಿತ ಆರೋಪಿಯನ್ನು ಲಕ್ಷ್ಮೀ ಪೋಪಟ್ ಕಾಂಬಳೆ (45) ಎಂದು ಗುರುತಿಸಲಾಗಿದೆ. ಆಕೆ ಮನೆಕೆಲಸದ ಜೊತೆಗೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವಾಸಾರ್ಹ ಮಾಹಿತಿ ಮೇರೆಗೆ ಜುಲೈ 13ರಂದು ಎಂಆರ್ಎಂಸಿ ವೈದ್ಯಕೀಯ ಕಾಲೇಜು ಎದುರಿನ ಟೈರ್ ಮತ್ತು ಪಂಚರ್ ಅಂಗಡಿ ಹಿಂಭಾಗದ ಮನೆಯಲ್ಲಿ ಸಿಸಿಬಿ ತಂಡ ದಾಳಿ ನಡೆಸಿತು. ಈ ವೇಳೆ ಆರೋಪಿಯನ್ನು ಬಂಧಿಸಿ, ವೇಶ್ಯಾವಾಟಿಕೆಗೆ ಒಳಗಾಗಿದ್ದ ಮೂವರು ಮಹಿಳೆಯರನ್ನು ಸಂರಕ್ಷಿಸಲಾಗಿದೆ.
ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತರಾದ ಶಾಲೂ ಐಪಿಎಸ್, ಪ್ರವೀಣ ಹೆಚ್. ನಾಯಕ್ ಹಾಗೂ ಸಹಾಯಕ ಪೊಲೀಸ್ ಆಯುಕ್ತ ಜೇಮ್ಸ್ ಮಿನೇಜಿಸ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಅರುಣಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿತು.
ಇದನ್ನು ಓದಿದ್ದೀರಾ? ಕಲಬುರಗಿ | ಆಟೋ ಡಿಕ್ಕಿ: 6 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಅಭಿನಂದಿಸಿದ್ದಾರೆ.





