ಕಲಬುರಗಿ | ಕಾರ್ಮಿಕನ ಮೃತದೇಹವನ್ನು ಪ್ರಾಣಿ ರೀತಿ ಎಳೆದೊಯ್ದು ವಿಕೃತಿ ಮೆರೆದ ಸಿಮೆಂಟ್ ಕಂಪನಿ

Date:

ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪ್ರಾಣಿಯ ರೀತಿ ಎಳೆದೊಯ್ದು ‘ಶ್ರೀ ಸಿಮೆಂಟ್‌ ಕಂಪನಿ’ ವಿಕೃತಿ ಮೆರೆದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

- Advertisement -

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿರುವ ಶ್ರೀ ಸಿಮೆಂಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಬಿಹಾರ ಮೂಲದ ಚಂದನ್ ಸಿಂಗ್ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಕಂಪನಿಯ ಸಿಬ್ಬಂದಿಗಳು ಮಣ್ಣಿನ ರಸ್ತೆಯಲ್ಲಿ ಪ್ರಾಣಿಯ ರೀತಿ ಎಳೆದೊಯ್ದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಗುತ್ತಿಗೆದಾರನ ಮೂಲಕ ಸಿಮೆಂಟ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಚಂದನ್ ಸಿಂಗ್ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದಾಗ್ಯೂ, ಮಂಗಳವಾರ ಕೆಲಸಕ್ಕೆ ತೆರಳಿದ್ದರು ಎನ್ನಲಾಗಿದೆ.

ಈ ವೇಳೆ, ಅವರಿಗೆ ಬಿಪಿ ‘ಲೋ’ ಆಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತಪಟ್ಟ ಕಾರ್ಮಿಕನ ಮೃಹದೇಹವನ್ನು ಸಿಮೆಂಟ್‌ ಕಂಪನಿಯು ಅಮಾನುಷವಾಗಿ ಎಳೆದೊಯ್ದು ವಿಕೃತಿ ಮೆರೆದಿದೆ.

ಕಾರ್ಮಿಕನ ಸಾವಿಗೆ ಸಂಬಂಧಿಸಿದಂತೆ ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...