ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ರಾಜುಕುಮಾರ್ (45) ಹಾಗೂ ಅವರ ಪುತ್ರಿ ಸುಮಾ (14) ಎಂದು ಗುರುತಿಸಲಾಗಿದೆ. ಮಂಗಳವಾರ (ಏ.7) ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸಿಮೆಂಟ್ ಮಿಕ್ಸರ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ವಾಹನದ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
This video cannot be played in your browser. Open the video directly






