ಕಲಬುರಗಿ | ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ ಕೇಂದ್ರೀಯ ವಿವಿ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

Date:

Advertisements

ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವನ್ನು ಕೋಮು ದ್ವೇಷ ಬಿತ್ತುವ ಕೇಂದ್ರವಾಗಿಸಬಾರದು ಎಂದು ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿದೆ.

ಕಲಬುರಗಿಯಲ್ಲಿ ಪಾದಯಾತ್ರೆ ನಡೆಸಿದ ಒಕ್ಕೂಟ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ತೆರಳಿ ಕುಲಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ” 2009ರಲ್ಲಿ ಸ್ಥಾಪನೆಯಾದ ಕೇಂದ್ರೀಯ ವಿಶ್ವವಿದ್ಯಾಲಯ ಕಲ್ಯಾಣ ಕರ್ನಾಟಕ ಭಾಗವನ್ನು ಶೈಕ್ಷಣಿಕವಾಗಿ ಸಬಲಿಕರಿಸುವ ಉದ್ದೇಶ ಹೊಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ತನ್ನ ಸದುದ್ದೇಶದಿಂದ ದೂರಸರಿದು ಮನುವಾದಿ ಆರ್‌ಎಸ್ಎಸ್ ಮತ್ತು ಎಬಿವಿಪಿಯ ಸಮಾಜ ವಿರೋಧಿ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿದೆ. ಇದರಿಂದಾಗಿ ಗುಣಮಟ್ಟದ ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಕೇಂದ್ರೀಯ ವಿಶ್ವವಿದ್ಯಾಲಯವು ಸಂಘಿಗಳ ಹಿಂದುತ್ವದ ಕಾರ್ಖಾನೆಯಂತೆ ಬಳಕೆಯಾಗುತ್ತಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕೋಮು ಸಂಘಟನೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಕೋಮುವಾದಿ ವಿಚಾರಧಾರೆಯನ್ನು ವಿದ್ಯಾರ್ಥಿಗಳ ಮನಸಿನಲ್ಲಿ ಬಿತ್ತುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಿದ್ದ ವಿಶ್ವವಿದ್ಯಾಲಯವು ಸಂಘ ಪರಿವಾರದ ಅವಾಸ ಸ್ಥಾನವಾಗಿದೆ” ಎಂದು ಕಿಡಿಕಾರಿದ್ದಾರೆ.

Advertisements

“ವಿಶ್ವವಿದ್ಯಾಲಯವು ವಿಧ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಮತ್ತು ಜಿಲ್ಲೆಯ ಆಡಳಿತ ಮತ್ತು ವಿರೋಧ ಪಕ್ಷಗಳ ಬಲವಾದ ಹೋರಾಟದಿಂದ ಅಸ್ಥಿತ್ವಕ್ಕೆ ಬಂದಿದೆ. ಕಲ್ಯಾಣ ಕರ್ನಾಟಕದ ರೈತರು, ಕೂಲಿಕಾರರು, ಬಡವರ ಮಕ್ಕಳಿಗೆ ಪ್ರಗತಿಪರ, ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಹೋರಾಟಗಾರರ ಕನಸಾಗಿತ್ತು. ಆದರೆ, ಆ ಎಲ್ಲ ಕನಸುಗಳು ಭಗ್ನಗೊಂಡು ಕೊಮುವಾದಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಇದರ ವಿರುದ್ಧ ಹೋರಾಟ ಮಾಡುವ ಮೊದಲ ಹೆಜ್ಜೆಯಾಗಿ ಮಂಗಳವಾರ ಕಾಲ್ನಡಿಗೆ ಜಾಥಾ ಪಾದಯಾತ್ರೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

ಹೋರಾಟಗಾರರ ಹಕ್ಕೊತ್ತಾಯಗಳು:

  1. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಲ್ಲ ಸಿದ್ಧಾಂತಗಳಿಗೆ ಸಮನಾಗಿ ಮಾನ್ಯತೆ ಕೊಡಬೇಕು.
  2. ವಿಶ್ವವಿದ್ಯಾಲಯದ ಆವರಣದಲ್ಲಿ ಕೋಮುವಾದಕ್ಕೆ ಪ್ರೋತ್ಸಾಹ ಕೊಡಬಾರದು.
  3. ನೇಮಕಾತಿಗಳಲ್ಲಿ ಕಲ್ಯಾಣ ಕರ್ನಾಟಕದ ರೈತರ, ಕೂಲಿಕಾರರ ಮಕ್ಕಳಿಗೆ ಆದ್ಯತ ನೀಡಬೇಕು.
  4. ವಿಶ್ವವಿದ್ಯಾಲಯದಲ್ಲಿ ಕೇವಲ ಆಂಧ್ರ – ತೆಲಂಗಾಣ ಜನರನ್ನು ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು.
  5. ನೌಕರರ ಮತ್ತು ಶಿಕ್ಷಕರ ಮೇಲೆ ಆಡಳಿತ ಮಂಡಳಿ ನಡೆಸುತ್ತಿರುವ ದಾಳಿ, ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು.

ಪ್ರತಿಭಟನೆಯಲ್ಲಿ ಶರಣಬಸಪ್ಪಾ ಮಮಶೆಟ್ಟಿ, ನಾಗೇಂದ್ರ ಥಾಂಬೆ,ಅರ್ಜುನ್ ಗೊಬ್ಬುರು,ಭಿಮಶಟ್ಟಿ ಯಂಪಳ್ಳಿ,ಮೇಘ ರಾಜ ಕಠಾರ,ಎಂ.ಬಿ. ಸಜ್ಜನ, ಪ್ರಭು ಪ್ಯಾರಬದ್ದಿ, ಗುಂಡಪ್ಪ ಅರಣಕಲ್,ಜಾಫರ್ ಖಾನ್, ಶಂಕ್ರಯ್ಯಾ ಘಂಟಿ,ಪದ್ಮಾ ಎನ್ ಮಾಲಿ ಪಾಟೀಲ್,ಶಿವುಲಿಂಗಮ್ಮ ಲೆಂಗಟಕರ,ಕುಸಾಳೆ, ಪಾಂಡುರಂಗ ಮಾವಿನಕರ, ಅನಿಲ್ ಗುತ್ಯದಾರ. ಜಾವೇದ್,ಹುಸೇನ್,ಸಾಗರ ಗಾಳೆ,ಅಲ್ತಾಫ್ ಇನಾಮಂದಾರ, ಸಾಯಬಣ್ಣ ಗುಡುಬಾ ಇನ್ನಿತರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X