ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಜಯಶ್ರೀ (21) ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಕೇಂದ್ರೀಯ ವಿವಿಯಲ್ಲಿ ದ್ವಿತೀಯ ವರ್ಷದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಒಡಿಶಾ ಮೂಲದವಳಾದ ಜಯಶ್ರೀ ಮಂಗಳವಾರ ರಾತ್ರಿ ಡೀನ್ ಸ್ಪೂಡೆಂಟ್ ವೆಲಫೇರ್ ಬಸವರಾಜ ಕುಬಕಡ್ಡಿ ಅವರ ಜೊತೆ ಮಾತನಾಡಿದ ಬಳಿಕ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದಳು. ಬುಧವಾರ ಕ್ಲಾಸಿಗೆ ಬರಲಿಲ್ಲ, ಮಧ್ಯಾಹ್ನ ಊಟಕ್ಕೆ ಬಂದಾಗ ರೂಮ್‌ಗೆ ಬೀಗ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಕಾರ್ಪೆಂಟರ್ ಅವರನ್ನು ಕರೆಯಿಸಿ ಹಾಸ್ಟೆಲ್ ರೂಮಿನ ಬಾಗಿಲನ್ನು ಒಡೆದು ಒಳಹೊಕ್ಕಾಗ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂತು ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಭಾರತದ ಮೇಲೆ 25% ತೆರಿಗೆ ಹೇರಿದ ಟ್ರಂಪ್
ಸ್ಥಳಕ್ಕೆ ನಾರೋಣ ಪೊಲೀಸ್ ಸಿಬ್ಬಂದಿಗಳಾದ ಸಿಪಿಐ ಪ್ರಕಾಶ ಯಾತನೂರ್, ಇನ್‌ಚಾರ್ಜ್ ಪಿಐಎಸ್‌ಐ ಇಂದಿಮಂತಿಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
