ಕಲಬುರಗಿ | ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ವಿಚಾರಣೆ ನ.13ಕ್ಕೆ ಮುಂದೂಡಿಕೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್‌) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರವು ನವೆಂಬರ್‌ 13ರಂದು ಮಧ್ಯಾಹ್ನ 2.30ಕ್ಕೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಕಲಬುರಗಿ ಪೀಠ ಶುಕ್ರವಾರ ನಿರ್ದೇಶಿಸಿದೆ.

- Advertisement -

ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಜಿಲ್ಲಾಡಳಿತಕ್ಕೆ ನಿರ್ದೇಶಿಸಲು ಕೋರಿ ಆರೆಸ್ಸೆಸ್‌ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್‌ ಪಾಟೀಲ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ.ಜಿ.ಎಸ್‌. ಕಮಾಲ್‌ ಅವರ ಏಕಸದಸ್ಯ ಪೀಠದಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ವಾದ ಮಂಡಿಸಿದರು. ಅವರು, ‘ನವೆಂಬರ್‌ 5ರಂದು ಬೆಂಗಳೂರಿನ ಅಡ್ವಕೇಟ್‌ ಜನರಲ್‌ ಕಚೇರಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೆ ಸರ್ಕಾರದ ನಿರ್ಧಾರ ಇನ್ನೂ ಪ್ರಕಟವಾಗಿಲ್ಲ,’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸರ್ಕಾರದ ಪರವಾಗಿ ಅಡ್ವಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಹಾಜರಾಗಿ, ‘ಒಂದು ವಾರದೊಳಗೆ ಮನವಿ ಸಲ್ಲಿಸಿರುವ ಎಲ್ಲ ಸಂಘಟನೆಗಳಿಗೂ ಪಥಸಂಚಲನಕ್ಕೆ ಅನುಮತಿ ನೀಡಲಾಗುವುದು. ಯಾವ ದಿನಾಂಕದಲ್ಲಿ ಅವಕಾಶ ನೀಡಬೇಕು ಎಂಬುದನ್ನು ಸರ್ಕಾರವು ಲಿಖಿತವಾಗಿ ತಿಳಿಸುತ್ತದೆ,’ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಟ್ಯಾಂಕರ್‌ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ಅರುಣ್‌ ಶ್ಯಾಮ್‌ ಅವರು, ‘ನವೆಂಬರ್‌ 13 ಅಥವಾ 16ರಂದು ಪಥಸಂಚಲನ ನಡೆಸಲು ಅವಕಾಶ ನೀಡಿದರೆ ಅನುಕೂಲವಾಗುತ್ತದೆ. ಸಭೆ ನಡೆಯಲಿರುವ ಕಲ್ಯಾಣ ಮಂಟಪವನ್ನು ಆ ದಿನಾಂಕಗಳಲ್ಲಿ ಮಾತ್ರ ಕಾಯ್ದಿರಿಸಲಾಗಿದೆ,’ ಎಂದು ಹೇಳಿದರು.

ವಾದ – ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಎಂ.ಜಿ.ಎಸ್‌. ಕಮಾಲ್‌ ಅವರು, ನವೆಂಬರ್‌ 5ರಂದು ನಡೆದ ಶಾಂತಿ ಸಭೆಯು ಫಲಪ್ರದವಾಗಿದೆ ಎಂದು ಉಲ್ಲೇಖಿಸಿದರು. ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತು ಸರ್ಕಾರ ತನ್ನ ನಿಲುವು ನವೆಂಬರ್‌ 13ರಂದು ಮಧ್ಯಾಹ್ನ 2.30ಕ್ಕೆ ಸ್ಪಷ್ಟಪಡಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...