ಕಲಬುರಗಿ | ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಆದೇಶಿಸಿ ಸುತ್ತೋಲೆ; ನಿಯಮ ಬದಲಿಸುವಂತೆ ದಸಂಸ ಆಗ್ರಹ

Date:

Advertisements

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಆದೇಶಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮನವಿ ಪತ್ರ ಸಲ್ಲಿಸಿKalaburagi ಮಾತನಾಡಿ, “ಮೇ 20ರಂದು ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ, ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ನೇಮಕ ಪ್ರಕ್ರಿಯೆ ನಡೆಸಲು ಆದೇಶ ನೀಡಿರುವುದನ್ನು ದಲಿತ ಸಂಘರ್ಷ ಸಮಿತಿಯು ಸ್ವಾಗತಿಸುತ್ತದೆ. ಹಲವಾರು ವರ್ಷಗಳ ಪರ್ಯಂತ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳೇ ನಡೆಯದೆ ಅಹಿಂದ ಸಮುದಾಯದ ಲಕ್ಷಾಂತರ ನಿರುದ್ಯೋಗಿ ಯುವ ಸಮೂಹವು ಅಕ್ಷರಶಃ ಬೀದಿಗೆ ಬಿದ್ದಿತ್ತು. ಇಂತಹ ನಿರಾಶದಾಯಕ ಹೊತ್ತಿನಲ್ಲಿ ತಮ್ಮ ಸರ್ಕಾರದ ಈ ಆದೇಶವು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಪ್ರಮುಖ ಹೆಜ್ಜೆ ಆಗಲಿದೆ” ಎಂದರು.

“ಸುತ್ತೋಲೆಯ 1 ಮತ್ತು 6ನೇ ಷರತ್ತುಗಳು ಈ ಆದೇಶದ ಸದುದ್ದೇಶದ ಆಶಯಗಳಿಗೇ ವಿರುದ್ಧವಾಗಿವೆ. 1ನೇ ಷರತ್ತಿನಲ್ಲಿ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದಿದೆ. ಇದು ಮೀಸಲಾತಿ ವಿರೋಧಿಗಳಿಗೆ ಅನುಕೂಲಕರವಾಗಿದ್ದು ಅದನ್ನು ರದ್ದುಪಡಿಸಿ ಎಷ್ಟೇ ಅವಧಿಯ ನೇಮಕಾತಿ ಮಾಡಿಕೊಂಡರೂ ಮೀಸಲಾತಿ ಅನುಸರಿಸುವಂತೆ ಆದೇಶಿಸಬೇಕು” ಎಂದು ಒತ್ತಾಯಿಸಿದರು.

Advertisements

“6ನೇ ಷರತ್ತಿನಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಟ 20 ಮಂದಿ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು ಎಂದಿರುವುದು ತುಂಬಾ ಅವೈಜ್ಞಾನಿಕವಾಗಿದ್ದು, ಮೀಸಲಾತಿಯನ್ನು ವಂಚಿಸಲು ಸದಾ ಸಿದ್ದವಿರುವವರಿಗೆ ಈ ನಿಬಂಧನೆ ಸಹಕಾರಿಯಾಗಲಿದೆ. 20ಕ್ಕೂ ಹೆಚ್ಚಿನ ಸಂಖ್ಯೆಯ ನೇಮಕಾತಿಗಳಿದ್ದಾಗ ಮಾತ್ರ ಮೀಸಲಾತಿ ಉದ್ಯೋಗಗಳನ್ನು 20ರ ಒಳಗೇ ನಿಗದಿ ಮಾಡುತ್ತಾ ಹೋಗುವ ಮೀಸಲಾತಿ ವಂಚಕರ ಚಾಳಿಗೆ ಇದು ರತ್ನಗಂಬಳಿ ಹಾಸಿ ರಹದಾರಿ ಕಲ್ಪಿಸಿ ಕೊಟ್ಟಂತಾಗುತ್ತದೆ” ಎಂದರು.

“ಈವರೆಗೆ ನಡೆದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಅವಲೋಕನ ಮಾಡಿದರೆ ಜಾತಿವಾದಿ ಅಧಿಕಾರಿಗಳ ಮೀಸಲಾತಿ ವಿರೋಧಿ ದುರಾಡಳಿತಕ್ಕೆ ಸಾಕಷ್ಟು ಪುರಾವೆಗಳು ಸಿಗುತ್ತವೆ. ಸಮಾಜದಲ್ಲಿ ಮೀಸಲಾತಿ ಬಗ್ಗೆ ಅಸಹನೆ ತುಂಬಿ ತುಳುಕುತ್ತಿರುವ ಹೊತ್ತಿನಲ್ಲಿ ಪಕ್ಷಪಾತ ಮಾಡುವ ಜಾತಿವಾದಿ ಅಧಿಕಾರಿಗಳಿಗೆ ಕಾನೂನುಬದ್ಧ ಪ್ರೋತ್ಸಾಹ ನೀಡಿದಂತಾಗುವುದರಲ್ಲಿ ಸಂದೇಹವೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸದರಿ 1 ಮತ್ತು 6ನೇ ಷರತ್ತನ್ನು ರದ್ದುಪಡಿಸಲು ಸಾಮಾಜಿಕ ನ್ಯಾಯಕ್ಕೆ ಬದ್ಧತೆ ಹೊಂದಿರುವ ತಮ್ಮ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು.  ಕೆಂದು ದಸಂಸ ಆಗ್ರಹಿಸುತ್ತದೆ. ಹುದ್ದೆಗಳ ಸಂಖ್ಯೆ ಎಷ್ಟೇ ಇರಲಿ ಮತ್ತು ಎಷ್ಟೇ ಅವಧಿಯದ್ದಾಗಿರಲಿ ಅಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ರೋಸ್ಟರ್ ನಿಯಮಗಳ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕು. ಸರ್ಕಾರ ಸದರಿ ಆದೇಶವನ್ನು ಮಾರ್ಪಾಡು ಮಾಡಿ, ಮರು ಸುತ್ತೋಲೆ ಹೊರಡಿಸಲು ಜರೂರು ಕ್ರಮಕೈಗೊಳ್ಳಬೇಕು” ಎಂದು ಈ ಮೂಲಕ ಒತ್ತಾಯಿಸುತ್ತೇವೆ.

“ಒಂದು ವೇಳೆ ಸರ್ಕಾರ ಈ ಸಂಬಂಧವಾಗಿ ಯಾವುದೇ ತುರ್ತು ಕ್ರಮ ಕೈಗೊಳ್ಳದೇ ಇದ್ದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಮಾರ್ಪಾಡು ತನ್ನಿ; ಡಿಎಸ್‌ಎಸ್ ಒತ್ತಾಯ

ಈ ಸಂದರ್ಭದಲ್ಲಿ ಶಿವಶರಣಪ್ಪ ಕುರನಳ್ಳಿ, ರಮೇಶ ಕವಡೆ, ಅಶೋಕ ಹಲಕಟ್ಟಿ, ಶಿವಕುಮಾರ, ಮಲ್ಲಿಕಾಜುನ ಗೌಡ, ಸಂತೋಷ ತೆಗನೂರ, ಡಾ. ಜಯಕುಮಾರ್ ನೂಲಕರ್, ಮಲ್ಲಿಕಾರ್ಜುನ ಹಳ್ಳಿ, ಮಲ್ಲಣ್ಣ ಮರತೂರ, ಬಸವರಾಜ್ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X